ದಾವಣಗೆರೆ : ಸೆಪ್ಟೆಂಬರ್ ತಿಂಗಳ ಎರಡನೇ ವಾರದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ದಾವಣಗೆರೆಯಲ್ಲಿ
ನಡೆಯಲಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ .
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಸೇರಿದಂತೆ ಸರಣಿ ಚುನಾವಣೆಗಳು ಎದುರಾಗುವ ಹಿನ್ನೆಲೆಯಲ್ಲಿ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಕಾರ್ಯಕಾರಿಣಿ ಸಭೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಬಸವರಾಜ ಬೊಮ್ಮಾಯಿಯವರು ರಾಜ್ಯ ಮುಖ್ಯಮಂತ್ರಿಗಳಾದ ಬಳಿಕ ನಡೆಯುತ್ತಿರುವ ಮೊದಲ ಕಾರ್ಯಕಾರಿಣಿ ಸಭೆ ಇದಾಗಿದ್ದು, ಸಭೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಬಿ.ಎಲ್.ಸಂತೋಷ್ ಅವರು ಪಾಲ್ಗೊಳ್ಳಲಿದ್ದಾರೆನ್ನಲಾಗುತ್ತಿದೆ .