News Karnataka Kannada
Monday, April 29 2024
ದಾವಣಗೆರೆ

ದಾವಣಗೆರೆಯಲ್ಲಿ ಭಾರೀ ಮಳೆಗೆ ಮೂರನೇ ಬಲಿ

Suicide Jump River
Photo Credit :

ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆರೆಯಲ್ಲಿ ಜಾನುವಾರ ಮೈತೊಳೆಯಲು ಹೋಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಮಳೆಗೆ ಮೂವರು ಬಲಿಯಾದಂತಾಗಿದೆ.

ದಾವಣಗೆರೆ ಜಿಲ್ಲೆಯ ಹುಚ್ಚವನಹಳ್ಳಿ ಗ್ರಾಮದಲ್ಲಿ ಕೆರೆಯಲ್ಲಿ ಜಾನುವಾರ ಮೈತೊಳೆಯಲು ಹೋಗಿದ್ದ ತಿಪ್ಪೇಸ್ವಾಮಿ (48) ಮೃತಪಟ್ಟಿದ್ದಾರೆ.

ಏಕಾಏಕಿ ಕೆರೆಗೆ ನೀರು ಹರಿದು ಬಂದ ಕಾರಣ ಕೆರೆಯಲ್ಲಿ ಮುಳುಗಿ ತಿಪ್ಪೇಸ್ವಾಮಿ ಮೃತಪಟ್ಟಿದ್ದಾರೆ. ಮಾಯಾಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ದಾವಣಗೆರೆ ಜಿಲ್ಲೆಯಲ್ಲಿ ಈಗಾಗಲೇ ಮಳೆಗೆ ಇಬ್ಬರು ಮೃತಪಟ್ಟಿದ್ದು, ನಿನ್ನೆ ಹರಿಹರ ತಾಲೂಕಿನ ಮಲೇಬೆನ್ನೂರು ಹೋಬಳಿಯ ಗೋವಿನಹಾಳು ಗ್ರಾಮದಲ್ಲಿ ಮಳೆಯಿಂದ ಮನೆ ಕುಸಿದು 62 ವರ್ಷದ ಬಸವರಾಜಪ್ಪ ಎಂಬುವರು ಮೃತಪಟ್ಟಿದ್ದಾರೆ. ನಲ್ಲೂರಿನಲ್ಲಿ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು