ದಾವಣಗೆರೆ : ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರೇ ಭಾಗಿಯಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಟ್ ಕಾಯಿನ್ ಕೇಸ್ ಬಗ್ಗೆ ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ.ವಿಚಿತ್ರ ಏನಂದ್ರೆ ಬಿಟ್ ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರೇ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಟ್ ಕಾಯಿನ್ ಪ್ರಕರಣ 3-4 ವರ್ಷ ಹಿಂದಿನದ್ದು, ಇದು ಬೊಮ್ಮಾಯಿ ಸಿಎಂ ಆದ ಬಳಿಕ ನಡೆದ ಘಟನೆ ಅಲ್ಲ. ತನಿಖೆ ಬಳಿಕ ಯಾರು ತಪ್ಪು ಮಾಡಿದ್ದಾರೆ ಎಂದು ಗೊತ್ತಾಗಲಿದೆ. ಪ್ರಕರಣದಲ್ಲಿ ಯಾರೇ ಪ್ರಭಾವಿಗಳಿರಲಿ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.