ಬೊಮ್ಮಾಯಿ ನೇತೃತ್ವದಲ್ಲಿ ಮುಂದೆ ಕರ್ನಾಟಕದಲ್ಲಿ ಸರ್ಕಾರ ಅಧಿಕಾರಕ್ಕೆ ಬರಲಿದೆ : ಅಮಿತ್ ಶಾ

ದಾವಣಗೆರೆ: ಕರ್ನಾಟಕದಲ್ಲಿ ಮತ್ತೆ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಸಂಸದ ಪ್ರಹ್ಲಾದ್ ಜೋಷಿ ಪುತ್ರಿ ವಿವಾಹಕ್ಕೆ ಆಗಮಿಸಿದ್ದ ಅಮಿತ್ ಶಾ ದಾವಣಗೆರೆಯ ಜಿ.ಎಂ.ಐ.ಟಿ ಕ್ಯಾಂಪಸ್‍ನ ಜನಸಭಾ ಸ್ಥಳ ಇಲ್ಲಿ ಆಯೋಜಿಸಿರುವ ಗಾಂಧಿ ಭವನ ಉದ್ಘಾಟನೆ, ಪೊಲೀಸ್ ಪಬ್ಲಿಕ್ ಸ್ಕೂಲ್ ಉದ್ಘಾಟನೆ ಹಾಗೂ ಜಿ.ಎಂ.ಐ.ಟಿ. ಕೇಂದ್ರ ಗ್ರಂಥಾಲಯದ ಉದ್ಘಾಟನೆ ನೆರವೇರಿಸಿ ಜಿಎಂಐಟಿ ಕ್ಯಾಂಪಸ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಕರ್ನಾಟಕ ಸರ್ಕಾರವನ್ನು ಬಹಳ ಸೂಕ್ಷ್ಮವಾಗಿ ದೆಹಲಿಯಲ್ಲಿ ಗಮನಿಸಲಾಗುತ್ತಿದೆ. ಬೊಮ್ಮಾಯಿ ನೇತೃತ್ವದಲ್ಲಿ ಮುಂದೆ ಕರ್ನಾಟಕದಲ್ಲಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮುಂದೆ ಯಾವುದೇ ಮಹಾಮಾರಿ ಬಂದರೂ ಭಾರತದಲ್ಲಿ ಆಕ್ಸಿಜನ್ ಸಮಸ್ಯೆಯಾಗದು. ಸರ್ಕಾರವನ್ನು ಬಹಳ ಸಮರ್ಥವಾಗಿ ನಿಭಾಯಿಸಿದ ಯಡಿಯೂರಪ್ಪ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡುವಂತೆ ಹೇಳಿ ಪದತ್ಯಾಗ ಮಾಡುವುದಾಗಿ ಹೇಳಿದಾಗ ಇದಕ್ಕೆ ನಾವು ಒಪ್ಪಿಗೆ ಸೂಚಿಸಿ, ಪಕ್ಷ ಬಸವರಾಜ ಬೊಮ್ಮಾಯಿ ಅವರನ್ನು ಹೊಸ ಸಿಎಂ ಆಗಿ ಮಾಡಿತು ಎಂದರು.

ಕರ್ನಾಟಕದಲ್ಲಿ ಅಭಿವೃದ್ಧಿಯ ಕಾಲ ಯಡಿಯೂರಪ್ಪರಿಂದಲೇ ಶುರುವಾಯಿತು. ಬೊಮ್ಮಾಯಿ ನೇತೃತ್ವದಲ್ಲಿ ಬಹುಮತದೊಂದಿಗೆ ಮುಂದೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಪಾರದರ್ಶಕ ಆಡಳಿತ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತೆ ಕರ್ನಾಟಕಕ್ಕೆ ಬರುತ್ತೇನೆ. ಇಲ್ಲಿನ ಅಭಿವೃದ್ಧಿ ಬಗ್ಗೆ ಚರ್ಚಿಸುತ್ತೇನೆ ಎಂದು ಅಮಿತ್ ಶಾ ತಿಳಿಸಿದರು.

ಕರ್ನಾಟಕದಲ್ಲಿ ಮೊದಲ ಅಲೆಯಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಬಹಳ ಸಮರ್ಥವಾಗಿ ಮಹಾಮಾರಿಯನ್ನು ಎದುರಿಸಿದೆ. ಕರ್ನಾಟಕದಲ್ಲಿ ಈವರೆಗೆ 4 ಕೋಟಿ ಜನರಿಗೆ ಮೊದಲ ಹಾಗೂ 1.20 ಲಕ್ಷ ಜನರಿಗೆ ಎರಡನೇ ಡೋಸ್ ಸೇರಿದಂತೆ ಒಟ್ಟು 5.20 ಕೋಟಿ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ವ್ಯಾಕ್ಸಿನ್ ಮಾತ್ರವೇ ಕೊರೋನಾ ವಿರುದ್ಧ ಹೋರಾಡಬಲ್ಲ ಏಕೈಕ ಆಯುಧ. ಒಂದು ಸರ್ಕಾರ ಜನರೊಂದಿಗೆ ಇದ್ದು ಜನರ ಜೊತೆ ಹೋರಾಟ ಮಾಡಲು. ಕೊರೋನಾ ಮಹಾಮಾರಿಯ ದೊಡ್ಡ ಆಘಾತ ಪರಿಣಾಮ ದಿನಗೂಲಿ ನೌಕರರ ಮೇಲಾಗಿದೆ. 5 ಕೆಜಿ ಯಂತೆ ಪ್ರತಿ ತಿಂಗಳು ಅಕ್ಕಿ ದೀಪಾವಳಿವರೆಗೆ 10 ಕೋಟಿ ಜನರಿಗೆ 10 ತಿಂಗಳ ಉಚಿತ ಅಕ್ಕಿ ನೀಡಲಾಗಿದೆ.

ಒಬ್ಬ ಮನುಷ್ಯನಿಂದ ಎಷ್ಟು ಮಾಡಲು ಸಾಧ್ಯವೋ ಒಂದು ಸರ್ಕಾರ ಎಷ್ಟು ಹೋರಾಡಲು ಸಾಧ್ಯವೋ ಅಷ್ಟನ್ನು ನಮ್ಮ‌ ಪ್ರಧಾನಿಗಳು ಮತ್ತು ಸರ್ಕಾರ ಮಾಡಿದೆ. ಎಲ್ಲಾ ಇಲಾಖೆಗಳು ಕೊರೋನಾ ವಿರುದ್ಧ ಹೋರಾಡಲು ಎರಡನೇ ಅವಧಿಯಲ್ಲಿ ದೇಶಾದ್ಯಂತ ಆಕ್ಸಿಜನ್ ಪ್ಲಾಂಟ್ ನಿರ್ಮಿಸುವ ಮೂಲಕ ಭಾರತ ಆತ್ಮನಿರ್ಭರ್(ಸ್ವಾವಲಂಬಿ) ದೇಶವಾಗಿದೆ. ಮುಂದೆ ಎಂತಹದ್ದೇ ಮಹಾಮಾರಿ ಬಂದರೂ ದೇಶದಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಸಮರ್ಥವಾಗಿ ನಿಭಾಯಿಸಬಲ್ಲ ಆತ್ಮವಿಶ್ವಾಸ ಮೋದಿ ನೇತೃತ್ವದ ಸರ್ಕಾರಕ್ಕೆ ಬಂದಿದೆ. ಎಲ್ಲರೂ ಅಕ್ಕಪಕ್ಕದ ಸ್ನೇಹಿತ ಬಳಗಕ್ಕೆ ವ್ಯಾಕ್ಸಿನ್ ನೀಡಿಸುವಂತಹ ಕೆಲಸವನ್ನು ಎಲ್ಲರೂ ಸ್ವಯಂ ಪ್ರೇರಿತವಾಗಿ ತೆಗೆದುಕೊಳ್ಳುವಂತೆ ಮಾಡಬೇಕು. ಪಕ್ಷದ ನಾಯಕರೆಲ್ಲ ಜನರಲ್ಲಿ ಹೆಚ್ಚೆಚ್ಚು ಜಾಗೃತಿ ಮೂಡಿಸಬೇಕು ಎಂದು ಅಮಿತ್ ಶಾ ಕರೆ ನೀಡಿದರು.

Sneha Gowda

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

1 hour ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

2 hours ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

2 hours ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

3 hours ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

3 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

3 hours ago