News Karnataka Kannada
Thursday, May 02 2024
ದಾವಣಗೆರೆ

ರೇಣುಕಾಚಾರ್ಯರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ

Renukacharya M P 21 7 21
Photo Credit :

ನವದೆಹಲಿ, – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಧ್ಯ ಕರ್ನಾಟಕದ ರಾಜಧಾನಿ ದಾವಣಗೆರೆಗೆ ಸ್ಥಾನ ನೀಡಬೇಕೆಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಬಿಜೆಪಿ ನಾಯಕರಿಗೆ ಆಗ್ರಹಿಸಿದ್ದಾರೆ. ಈ ಸಂಬಂಧ ಗುರುವಾರ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಸಹಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಮತ್ತಿತರರನ್ನು ಭೇಟಿಯಾದ ಶಾಸಕರ ನಿಯೋಗವು ದಾವಣಗೆರೆ ಜಿಲ್ಲೆಗೆ ಪ್ರಾತಿನಿಧ್ಯ ಕೊಡಬೇಕೆಂದು ಒತ್ತಾಯ ಮಾಡಿತು.
2018ರ ವಿಧಾನಸಭೆ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯಿಂದ ಐವರು ಶಾಸಕರನ್ನು ಗೆಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಯನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಗೆ ಸ್ಥಾನಮಾನ ನೀಡಬೇಕೆಂದು ಮನವಿ ಮಾಡಿದರು.ಸಚಿವ ಸ್ಥಾನ ನೀಡಿರುವುದರಿಂದ ಪಕ್ಷದ ಸಂಘಟನೆಗೆ ಸಹಾಯವಾಗಲಿದೆ. ಜೊತೆಗೆ ಅಕ್ಕಪಕ್ಕದ ಜಿಲ್ಲೆಗಳಲ್ಲೂ ಬಿಜೆಪಿಯನ್ನು ಇನ್ನಷ್ಟು ಬಲಪಡಿಸಬಹುದು. ಹೀಗಾಗಿ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ದಾವಣಗೆರೆಗೆ ಮೊದಲ ಪ್ರಾಶಸ್ತ್ಯ ನೀಡಬೇಕೆಂದು ಕೋರಿದರು. ಶಾಸಕರ ಮನವಿಯನ್ನು ಸಹನೆಯಿಂದಲೇ ಆಲಿಸಿರುವ ಬೊಮ್ಮಾಯಿ, ಮುಂದಿನ ಬಾರಿ ಖಂಡಿತವಾಗಿಯೂ ನ್ಯಾಯ ಒದಗಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು