ದಾವಣಗೆರೆ : ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ರಾತ್ರಿ ಊಟ ಮಾಡಿದಂತ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡು, ಹೊನ್ನಾಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.
ವಿಷಯ ತಿಳಿದು ಆಸ್ಪತ್ರೆಗೆ ತೆರಳಿದಂತ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು, ಮಕ್ಕಳ ಆರೋಗ್ಯವನ್ನು ವಿಚಾರಿಸಿದರು. ಅಲ್ಲದೇ ಮಕ್ಕಳಿಗೆ ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.
ಪುಡ್ ಪಾಯಿಸನ್ ಆಗಿ ಮಕ್ಕಳಿಗೆ ವಾಂತಿ-ಬೇಧಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ. ಆರೋಗ್ಯಾಧಿಕಾರಿಗಳು ಇಂದಿರಾ ಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ, ಆಹಾರ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಿಕೊಟ್ಟಿರೋದಾಗಿ ತಿಳಿದು ಬಂದಿದೆ.