ವಿಧಾನಸಭಾ ಚುನಾವಣೆ: 150 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ಬರುವುದು ಖಚಿತ; ಯಡಿಯೂರಪ್ಪ

ದಾವಣಗೆರೆ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗಳಿಸಿ ಮತ್ತೆ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯನಗರದಲ್ಲಿ ನಡೆದ ರಾಜ್ಯ ಕಾರ್‍ಯಕಾರಿಣಿಯಲ್ಲಿ 150 ಸ್ಥಾನ ಗಳಿಸಲೇಬೇಕು ಎಂಬ ತೀರ್ಮಾನ ಕೈಗೊಂಡಿರುವ ನಿಟ್ಟಿನಲ್ಲಿ 4-5 ತಂಡಗಳು ರಾಜ್ಯ ಪ್ರವಾಸ ರೂಪುರೇಷೆ ಸಿದ್ದವಾಗಿದೆ.

150 ಸ್ಥಾನ ಗಳಿಸುವ ಗುರಿ ಇಟ್ಟುಕೊಂಡಿದ್ದೇವೆ. 5-10 ಸೀಟು ಆ ಕಡೆ, ಈ ಕಡೆ ಆಗಬಹುದು. ಮತ್ತೆ ಅಧಿಕಾರಕ್ಕೆ ಬರುವುದು ಶತಃಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನ ಸಭಾ ಚುನಾವಣೆಗೆ ಒಂದು ವರ್ಷದ ಮುನ್ನವೇ ನಿಶ್ಚಿತ ಗುರಿ ಇಟ್ಟುಕೊಂಡು ಪ್ರವಾಸ, ಕಾರ್ಯಕರ್ತರು, ಸಾರ್ವಜನಿಕರ ಭೇಟಿ, ಮನೆ ಮನೆಗೆ ಪ್ರಧಾನಮಂತ್ರಿಯವರು ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳ ತಲುಪಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಇದೇ ಮೊದಲು. ಈಗಾಗಲೇ ಆ ನಿಟ್ಟಿನಲ್ಲಿ ಕೆಲಸ ಆರಂಭವಾಗಿದೆ. ದಾವಣಗೆರೆಯಲ್ಲಿನ ವಿಭಾಗೀಯ ಸಭೆ ಮುಗಿದ 4-5 ದಿನಗಳಲ್ಲಿ ನಮ್ಮ ನಾಯಕರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು 150ಕ್ಕೂ ಹೆಚ್ಚು ಸ್ಥಾನ ಗಳಿಸಿ, ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಪುನರುಚ್ಚರಿಸಿದರು.

ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ. ನಾಲ್ಕು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಅಭೂತಪೂರ್ವ ಜಯ ಗಳಿಸಿ ಪಕ್ಷ ಮತ್ತೆ ಅಧಿಕಾರಕ್ಕೆ ಬಂದಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ಜನರು ಸಹ ಕಾಂಗ್ರೆಸ್‌ನ್ನು ತಿರಸ್ಕರಿಸುತ್ತಿದ್ದಾರೆ. ಪ್ರಧಾನಿಯವರ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣದ ಹೇಳಿಕೆ ಕಾರ್ಯಗತವಾಗಲಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕೊಂಚ ಉಸಿರಾಡುತ್ತಿದೆ. ಕಾಂಗ್ರೆಸ್‌ಗೆ ಉಳಿಗಾಲ ಇಲ್ಲ. ಮುಂದಿನ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಗಳಿಸುವ ನಿಟ್ಟಿನಲ್ಲಿ ಶಕ್ತಿ ಮೀರಿ ಪ್ರಾಮಾಣಿಕ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

1 hour ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

2 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

2 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

4 hours ago