ದಾವಣಗೆರೆ

ಸಚಿವ ಸಂಪುಣ ವಿಸ್ತರಣೆ: ಸಿಎಂ ನಿರ್ಧಾರಕ್ಕೆ ನಾನು ಬದ್ಧ- ಸುನೀಲ್‌ಕುಮಾರ್

ದಾವಣಗೆರೆ, ಮೇ.14: ಬಿಜೆಪಿ ಪಕ್ಷದಲ್ಲಿ ನಾನು ಸಾಮಾನ್ಯ ಕಾರ್ಯಕರ್ತನಾಗಿದ್ದೆ. ನನ್ನನ್ನು ಚುನಾವಣೆಗೆ ನಿಲ್ಲಿಸಿ ಸಚಿವರನ್ನಾಗಿ ಮಾಡಿದೆ. ಮುಂದೆ ಕೂಡ ಪಕ್ಷ ಯಾವ ನಿರ್ಣಯ ತೆಗೆದುಕೊಳ್ಳುತ್ತೋ ಅದಕ್ಕೆ ನಾನು ಅದಕ್ಕೆ ಸಿದ್ಧನಿದ್ದೇನೆ ಎಂದು ಇಂಧನ ಸಚಿವ ಸುನೀಲ್‌ಕುಮಾರ್ ಹೇಳಿದರು.

ಸಚಿವ ಸ್ಥಾನಕ್ಕೆ 60 ರಿಂದ 100 ಕೋಟಿ ನೀಡುತ್ತಿದ್ದಾರೆ ಎನ್ನುವ ಆರೋಪ ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, “ಪಕ್ಷ ನಮಗೆ ಎಲ್ಲವನ್ನೂ ಕೊಟ್ಟಿದೆ ವಿನಃ ನಾವು ಪಕ್ಷಕ್ಕೆ ಏನು ಕೊಟ್ಟಿಲ್ಲ. ನಮ್ಮ ಪಕ್ಷದಲ್ಲಿ ವಿಚಾರಕ್ಕೆ ಆದ್ಯತೆಯೇ ಹೊರತು, ಹಣಕ್ಕೆ ಅಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ನಾವು ಮುಂದಿನ ಚುನಾವಣೆಗೆ ಹೋಗುತ್ತೇವೆ. ಸಚಿವ ಸಂಪುಟದ ವಿಸ್ತರಣೆ ಹಾಗೂ ಪುನಾರಚನೆ ಮುಖ್ಯಮಂತ್ರಿ ಅವರ ಪರಮಾಧಿಕಾರ. ಅವರು ಕರ್ನಾಟಕಕ್ಕೆ ಒಳಿತಾಗುವ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ,” ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಯಾವುದೇ ವಿಚಾರದಲ್ಲಾಗಲಿ ನಮ್ಮ ಪಕ್ಷ ವರಿಷ್ಠರಿಗೆ ದೂರದೃಷ್ಠಿಯಿದೆ. ಅದಕ್ಕಾಗಿ ನಮ್ಮ ನಾಯಕರಿಗೆ ಯಾವ ಸಮಯಕ್ಕೆ ಯಾವ ನಿರ್ಣಯ ತೆಗೆದುಕೊಳ್ಳಬೇಕು ಎನ್ನುವುದು ಗೊತ್ತಿದೆ. ಆರ್ ಎಸ್‌ಎಸ್ ಮೂಲದವರಿಗೆ ಸಚಿವ ಸ್ಥಾನದಿಂದ ಕೆಳಗಿಳಿಸುವುದಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮ ಬಜೆಟ್ ಮಂಡಿಸಿದ್ದಾರೆ. 180 ಯೋಜನೆಗಳಿಗೆ ಬಜೆಟ್ ಮಂಡಿಸುವ ಮೂಲಕ ಜೀವ ತುಂಬಿದ್ದಾರೆ. ಅವರಿಗೆ ಎಲ್ಲವೂ ತಿಳಿದಿದೆ ಎಂದು ಹೇಳಿದರು.

ಕಾಂಗ್ರೆಸ್ ನವರು ನಾಯಕರಿಲ್ಲದ ಅನಾಥವಾದ ಕೋಣೆಯಲ್ಲಿ ಇದ್ದಾರೆ. ಕಾರ್ಯಕರ್ತರು, ನಾಯಕರು ಕೂಡ ಅನಾಥರಾಗಿದ್ದಾರೆ. ಇಂದು ರಾಜ್ಯದ ಜನರಿಗೆ ಭರವಸೆ ಇದ್ದರೆ ಅದು ಬಿಜೆಪಿ ಹಾಗೂ‌ ಮೋದಿಯವರ ಮೇಲೆ ಮಾತ್ರ. ಕಾಂಗ್ರೆಸ್ ಹತ್ತು ಸುಳ್ಳು ಹೇಳಿ ನಿಜ ಮಾಡಲು ಹೊರಟಿದೆ. ಕಾಂಗ್ರೆಸ್ ನ ಭ್ರಷ್ಟಾಚಾರಿಗಳು ಜಾಮೀನಿನ ಮೇಲೆ ಇದ್ದವರು. ರಾಷ್ಟ್ರೀಯ ಅಧ್ಯಕ್ಷರಿಂದ ಹಿಡಿದು, ರಾಜ್ಯ ಅಧ್ಯಕ್ಷರೂ ಸಹ ಬೇಲ್ ಮೇಲೆ ಇದ್ದಾರೆ. ಆದರೆ ಅವರು ನಮ್ಮ ಮೇಲೆ ಆರೋಪ ಮಾಡುತ್ತಾರೆ ಎಂದು ವ್ಯಂಗ್ಯವಾಡಿದರು.

ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ‌ಲ್ಲಿ ನಿರಂತರ ಜ್ಯೋತಿ ಅಕ್ರಮ ಪ್ರಕರಣ ಕುರಿತಂತೆ ಈಗಾಗಲೇ ತನಿಖೆಗೆ ಆದೇಶ ನೀಡಲಾಗಿದೆ. ಹರಿಹರ ತಾಲೂಕಿನ ಎರಡು ಪೀಢರ್ ಗಳಲ್ಲಿ ತನಿಖೆ ನಡೆಸಿದ್ದೇವೆ. ಅದು ಸಮಾಧಾನ ತಂದಿಲ್ಲ. ಉಳಿದ 29 ಫೀಡರ್ ಗಳ ತನಿಖೆ ಮಾಡುವುದಕ್ಕೆ ಆದೇಶಿಸಿದ್ದೇನೆ. ನಿರಂತರ ಜ್ಯೋತಿ ಅಕ್ರಮ ಪ್ರಕರಣದಲ್ಲಿ ಯಾರನ್ನು ರಕ್ಷಿಸುವುದಿಲ್ಲ. ನಾನು ಇಂಧನ ಇಲಾಖೆ ಸಚಿವನಾದ ಮೇಲೆ 100ಕ್ಕೂ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇನೆ. ಅದೇ ರೀತಿ ಹರಿಹರದಲ್ಲಿ ಸಮಗ್ರ ತನಿಖೆ ಮಾಡಿಸಿ ಕ್ರಮ ಕೈಗೊಳ್ಳುವುದಾಗಿ ದಾವಣಗೆರೆಯಲ್ಲಿ ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದರು.

Gayathri SG

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

21 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

46 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago