News Karnataka Kannada
Monday, April 29 2024
ದಾವಣಗೆರೆ

ದಾವಣಗೆರೆ: ಪಾನಿಪುರಿ ತಿಂದು 19 ಮಕ್ಕಳು ಅಸ್ವಸ್ಥ

ದಾವಣಗೆರೆ  ಜಿಲ್ಲೆಯ ಹರಿಹರ  ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ಪಾನಿಪುರಿ  ತಿಂದು 19 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ  ನಡೆದಿದೆ.
Photo Credit : News Kannada

ದಾವಣಗೆರೆ: ದಾವಣಗೆರೆ  ಜಿಲ್ಲೆಯ ಹರಿಹರ  ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ಪಾನಿಪುರಿ  ತಿಂದು 19 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ  ನಡೆದಿದೆ.

19 ಮಕ್ಕಳ ಪೈಕಿ 4 ಮಕ್ಕಳ ಆರೋಗ್ಯ ಚಿಂತಾಜನಕವಾಗಿದೆ. ಇವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ರವಾನಿಸಲಾಗಿದೆ.

ಮಲೆಬೆನ್ನೂರಿನ ಜಾಮಿಯಾ ಮಸೀದಿ ಬಳಿ ಘಟನೆ ನಡೆದಿದ್ದು, ಉಪವಾಸ  ಅಂತ್ಯ ಮಾಡಿದ ನಂತರ ಮಸೀದಿ  ಮುಂಭಾಗ ಮಾರಾಟ ಮಾಡುತ್ತಿದ್ದ ಪಾನಿಪುರಿ ತಿಂದು 19 ಮಕ್ಕಳು ಅಸ್ವಸ್ಥಗೊಂಡಿದ್ದಾರೆ.

ಪಾನಿಪುರಿ ತಿಂದು ಕೆಲವೇ ಹೊತ್ತಿನಲ್ಲಿ ವಾಂತಿಯಾಗಿ ಮಕ್ಕಳು ಅಸ್ವಸ್ಥರಾಗಿದ್ದಾರೆ. ಕೂಡಲೇ ಪೋಷಕರು ಮಕ್ಕಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸ್ಥಳಕ್ಕೆ ಹರಿಹರ ತಹಶೀಲ್ದಾರ್ ಗುರುಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು