ಆಗಸ್ಟ್​ ಮೊದಲ ವಾರದಲ್ಲಿ ‌ಕಾಲುವೆಗೆ ಭದ್ರಾ ನದಿ ನೀರು

ದಾವಣಗೆರೆ: ಭಾರೀ ಮಳೆಯಿಂದಾಗಿ ಭದ್ರಾ ನದಿ  ಭರ್ತಿಯಾಗಿದ್ದು, ಇದೇ ಆಗಸ್ಟ್ ಮೊದಲ ವಾರದಲ್ಲಿ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ.  ಜಿಲ್ಲೆಯಲ್ಲಿ ಸುಮಾರು 60 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಭತ್ತ ಬೆಳೆಯುತ್ತಿದ್ದು, ಇದಕ್ಕೆಲ್ಲ ಭದ್ರಾ ನದಿ ನೀರೇ ಜೀವನಾಡಿಯಾಗಿದೆ

ಇನ್ನು ಆಗಸ್ಟ್ ಮೊದಲ ವಾರದಲ್ಲಿ ಕಾಲುವೆಗೆ ಭದ್ರಾ ನದಿ ನೀರು ಹರಿಸುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಸ್ ಎಸ್ ಮಲ್ಲಿಕಾರ್ಜುನ‌ ಅವರು, ಭದ್ರಾ ಡ್ಯಾಂನಿಂದ ದಾವಣಗೆರೆ ಜಿಲ್ಲೆಯ ಭದ್ರಾ ಕಾಲುವೆಗೆ ನೀರು ನೀಡುವ ಬಗ್ಗೆ ಇಷ್ಟರಲ್ಲಿ ‌ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕಾಲುವೆಗೆ ನೀರು ಬಿಡುವ ಬಗ್ಗೆ ಅಧಿಕೃತ‌ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಭದ್ರಾ ಡ್ಯಾಂಗೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ಆಗಸ್ಟ್ 1ರಿಂದಲೇ ನಾಲೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ಇತ್ತೀಚೆಗಷ್ಟೇ ರೈತ ಒಕ್ಕೂಟದ ನಿಯೋಗವು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು.

ಕಳೆದ ಕೆಲ ದಿನಗಳಿಂದ ಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ಹಳ್ಳ ಕೊಳ್ಳಗಳು, ಝರಿಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಡ್ಯಾಂಗೆ ಬರುತ್ತಿರುವ ನೀರು ಹೆಚ್ಚಾಗುತ್ತಿದೆ. ಈ ಮೂಲಕ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಖುಷಿಗೆ ಕಾರಣವಾಗಿದೆ.

Ashika S

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

22 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

35 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

60 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

2 hours ago