ಟೈಯರ್ ಸ್ಫೋಟಗೊಂಡು ಬುಲೆರೋ ಟೆಂಪೋ ಪಲ್ಟಿ: ಮೂವರು ಸಾವು

ದಾವಣಗೆರೆ: ವೇಗವಾಗಿ ತೆರಳುತ್ತಿದ್ದ ವೇಳೆ ಟೈಯರ್ ಸ್ಫೋಟಗೊಂಡು ಬುಲೆರೋ ಟೆಂಪೋವೊಂದು ಪಲ್ಟಿಯಾದ ಘಟನೆ ದಾವಣಗೆರೆ ನಗರದ ಹೊರವಲಯದ ಪಂಜಾಬಿ ಡಾಬಾ ಬಳಿಯ ಪೂನಾ- ಬೆಂಗಳೂರು ‌ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಈ ಘಟನೆ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು 6 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಂಧ್ರದ ಮಂತ್ರಾಲಯಂ‌ ತಾಲೂಕಿನ ಸಿಂಗರಾಜನಹಳ್ಳಿ ಗ್ರಾಮದ ನಿವಾಸಿಗಳಾದ ಮುಸ್ತಾನ್ (50), ಎಸ್​.ಟಿ ವೀರಣ್ಣ (30), ಪೆದ್ದ ವೆಂಕಣ್ಣ (38) ಮೃತ ದುರ್ದೈವಿಗಳು.

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಗಾಯಾಳುಗಳನ್ನ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದರಲ್ಲಿ ‌ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಇವರೆಲ್ಲ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯಂ‌ ತಾಲೂಕಿನ ಸಿಂಗರಾಜನಹಳ್ಳಿ ಗ್ರಾಮದ ನಿವಾಸಿಗಳಾಗಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಿಂದ ಮೆಣಸಿಕಾಯಿ ತೆಗೆದುಕೊಂಡು ತಡರಾತ್ರಿ ವಾಪಸ್ ತಮ್ಮೂರಿಗೆ ಹೋಗುವಾಗ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಈ ಸಂಬಂಧ ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Ashika S

Recent Posts

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

6 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

17 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

48 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

57 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

59 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

1 hour ago