ದಾವಣಗೆರೆ: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಊಟ ಮಾಡಿದ ಬಳಿಕ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಸಂತೆಬೆನ್ನೂರು ಬಳಿ ನಡೆದಿದೆ.
ಮಧ್ಯಾಹ್ನ ಊಟ ಮಾಡುತ್ತಿದ್ದಂತೆ 25ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ ಭೇದಿ ಶುರುವಾಗಿದೆ. ತಕ್ಷಣವೇ ಅಸ್ವಸ್ಥ ಮಕ್ಕಳಿಗೆ ಸಂತೆಬೆನ್ನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.
ಅಸ್ವಸ್ಥಗೊಂಡವರ ಪೈಕಿ ಐವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಈ ಮಧ್ಯೆ, ಹಾಸ್ಟೆಲ್ನಲ್ಲಿ ಸ್ವಚ್ಛತೆ ಕಾಪಾಡದೆ ಮಕ್ಕಳಿಗೆ ಆಹಾರ ನೀಡುತ್ತಿರುವ ಆರೋಪ ಕೇಳಿಬಂದಿದ್ದು, ವಸತಿ ಶಾಲೆ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮಕ್ಕೆ ಮಕ್ಕಳ ಪೋಷಕರು ಆಗ್ರಹಿಸಿದ್ದಾರೆ.