News Karnataka Kannada
Monday, April 29 2024
ದಾವಣಗೆರೆ

ಪಾನಿಪೂರಿ ಸೇವಿಸಿ ಮಕ್ಕಳು ಅಸ್ವಸ್ಥರಾದ ಪ್ರಕರಣ: ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಸಾವು

ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಭಾನುವಾರ ಸಾವನ್ನಪ್ಪಿದ್ದಾನೆ.
Photo Credit : News Kannada

ದಾವಣಗೆರೆ: ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಓರ್ವ ಬಾಲಕ ಭಾನುವಾರ ಸಾವನ್ನಪ್ಪಿದ್ದಾನೆ.

ಮನೆಬೆನ್ನೂರಿನ ಹಜರತ್ ಬಿಲಾಲ್ ಪುತ್ರ ಇರ್ಫಾನ್(6) ಮೃತ ಬಾಲಕ.

ಏನಿದು ಪ್ರಕರಣ: ಮಾರ್ಚ್ 15ರಂದು ಜಿಲ್ಲೆ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ರಂಜಾನ್ ಹಬ್ಬ ಹಿನ್ನೆಲೆ ಮಕ್ಕಳು ಉಪವಾಸ ಇದ್ದರು. ನಂತರ ಜಾಮೀಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದರು.

ವಾಂತಿ, ಭೇದಿ, ಹೊಟ್ಟೆ ನೋವಿನಿಂದ 19 ಮಕ್ಕಳು ಆಸ್ಪತ್ರೆ ಸೇರಿದ್ದರು. ಈ ಪೈಕಿ ನಾಲ್ವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಇಂದು ಚಿಕಿತ್ಸೆ ಫಲಿಸದೆ ಬಾಲಕ ಇರ್ಫಾನ್ ಸಾವನ್ನಪ್ಪಿದ್ದಾನೆ.

ಗಂಭೀರ ಸ್ಥಿತಿಯಲ್ಲಿದ್ದ ಇನ್ನೂ‌ ಮೂರು ಮಕ್ಕಳು ಸದ್ಯ ಚೇತರಿಸಿಕೊಂಡಿದ್ದಾರೆ. ಘಟನೆ ಬಳಿಕ ಪಾನಿಪುರಿ ಅಂಗಡಿ‌ ಮಾಲೀಕ ಪರಾರಿ ಆಗಿದ್ದಾನೆ.

ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು