ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಎಂ.ಪಿ.ರೇಣುಕಾಚಾರ್ಯ

ದಾವಣಗೆರೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಶೇ.40 ಸರ್ಕಾರವೆಂದು ಆರೋಪ ಮಾಡಿದ್ದು, ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇಣುಕಾಚಾರ್ಯ,  ಸುಳ್ಳು ಹೇಳುವ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ 9 ತಿಂಗಳಾದರೂ ಟೇಕಾಫ್ ಆಗಿಲ್ಲ. ಅಷ್ಟರಲ್ಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ 40 ಪರ್ಸೆಂಟೇಜ್ ಸರ್ಕಾರವೆಂದು ಗುತ್ತಿಗೆದಾರರ ಸಂಘದ ಕೆಂಪಣ್ಣ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಿಂದ ಕೆಳಗಿಳಿಯಲಿ ಎಂದರು.

ನಮ್ಮ ಸರ್ಕಾರದ ವಿರುದ್ಧ 40 ಪರ್ಸೆಂಟೇಜ್ ಸರ್ಕಾರ, ಪೇ ಸಿಎಂ ಅಂತೆಲ್ಲಾ ಕಾಂಗ್ರೆಸ್ಸಿಗರು ಆರೋಪ ಮಾಡಿದ್ದರು. ಈಗ ಅದೇ ಕೆಂಪಣ್ಣ ಕಾಂಗ್ರೆಸ್‌ ಸರ್ಕಾರದ ವಿರುದ್ಧ 40 ಪರ್ಸೆಂಟೇಜ್ ಸರ್ಕಾರವೆಂದು, ಯಾವುದೇ ಬಿಲ್ ಕೂಡ ಬಿಡುಗಡೆಯಾಗಿಲ್ಲವೆಂಬ ಆರೋಪ ಮಾಡಿದ್ದಾರೆ.

ಬಿಜೆಪಿ ಸರ್ಕಾರವು ಕೆಲಸವನ್ನು ಮಾಡುತ್ತಿತ್ತು. ಈಗ ಏನು ಕೆಲಸಗಳೇ ಆಗುತ್ತಿಲ್ಲವೆಂದು ಸ್ವತಃ ಅಧಿಕಾರಸ್ಥ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಕಾಂಗ್ರೆಸ್ಸಿನ ಗ್ಯಾರಂಟಿಗಳೂ ವೈಫಲ್ಯ ಕಂಡಿವೆ. ರೈತರಿಗೆ ಬರ ಪರಿಹಾರ ನೀಡುವಲ್ಲೂ ಸಿದ್ದರಾಮಯ್ಯ ಸರ್ಕಾರ ವಿಫಲರಾಗಿದೆ ಎಂದು ಕುಟುಕಿದರು.

Ashika S

Recent Posts

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

12 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

18 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

44 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

46 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

60 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

1 hour ago