ದಾಖಲೆ ಇಲ್ಲದೆ ಸಾಗಾಟ: ₹12.50 ಕೋಟಿ ಮೌಲ್ಯದ ಚಿನ್ನಾಭರಣ ವಶಕ್ಕೆ

ದಾವಣಗೆರೆ: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಕಡೆ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಈ ವೇಳೆ ದಾವಣಗೆರೆ ನಗರದ ಲೋಕಿಕೆರೆ ಚೆಕ್ ಪೋಸ್ಟ್ ಬಳಿ ಪರಿಶೀಲನೆ ನಡೆಸುವಾಗ ಸುಮಾರು 12.50 ಕೋಟಿ ರೂ. ಮೌಲ್ಯದ ಗೋಲ್ಡ್ & ಡೈಮಂಡ್ ಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಚುನಾವಣಾ ಅಧಿಕಾರಿ ಲೋಕೇಶ್ ನೇತೃತ್ವದಲ್ಲಿ ಸ್ವತ್ತು ವಶಕ್ಕೆ ಪಡೆದಿದ್ದು, ವಿವಿಧ ಆಭರಣ ಅಂಗಡಿಗಳಿಗೆ ಸರಿಯಾದ ದಾಖಲೆ ಇಲ್ಲದೆ ಸಾಗಿಸಲಾಗುತ್ತಿತ್ತು ಎಂದು ಮಾಹಿತಿ ತಿಳಿದು ಬಂದಿದೆ.

ಕಳೆದ ಏ. 6, 9 ದಿನಾಂಕದ ಹಳೆಯ ಬಿಲ್‌ಗಳು ಲಭ್ಯವಾಗಿವೆ. ಆಭರಣ ಸಾಗಾಟಕ್ಕೆ ಸರಿಯಾದ ಮಾಹಿತಿ ನೀಡದ ಕಾರಣಕ್ಕೆ 12.50 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಚುನಾವಣಾ ಅಧಿಕಾರಿ ರೇಣುಕಾ, ಕಮರ್ಷಿಯಲ್ ಟ್ಯಾಕ್ಸ್‌ ಇಲಾಖೆಯ ಉಪ ಆಯುಕ್ತ ಮಂಜುನಾಥ್ ನೇತೃತ್ವದಲ್ಲಿ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Chaitra Kulal

Recent Posts

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

6 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

10 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

12 mins ago

ಮೊಬೈಲ್‌ಗಾಗಿ ತಮ್ಮನನ್ನೆ ಕೊಂದ ಪಾಪಿ ಅಣ್ಣ

ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…

23 mins ago

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…

25 mins ago

ವೀಕ್ಷಕರ ಗಮನ ಸೆಳೆದ ನಾಣ್ಯ ಮತ್ತು ನೋಟುಗಳ ಪ್ರದರ್ಶನ

ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು  ಪರಂಪರೆ ಇಲಾಖೆಯಲ್ಲಿ  ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.

49 mins ago