News Karnataka Kannada
Sunday, April 28 2024
ದಾವಣಗೆರೆ

ಯತ್ನಾಳ್‌ ವಿರುದ್ಧ ವರಿಷ್ಠರಿಗೆ ದೂರು ನೀಡಲ್ಲ ಎಂದ ಯಡಿಯೂರಪ್ಪ

Yediyurappa says he will not complain against Yatnal to top leadership
Photo Credit : News Kannada

ದಾವಣಗೆರೆ: ರಾಜ್ಯ ಬಿಜೆಪಿಯಲ್ಲಿ ಪದಾಧಿಕಾರಿಗಳ ಆಯ್ಕೆಯಾದ ಬಳಿಕ ಭಿನ್ನಮತದ ಹೇಳಿಕೆ ತೀವ್ರವಾಗಿದೆ. ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತೀವ್ರವಾಗಿ ಅಸಮಾಧಾನಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಅವರ ಆರೋಪ, ಟೀಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. ಜತೆಗೆ, ಬಿಜೆಪಿಯ ಹೊಸ ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಸನಗೌಡ ಪಾಟೀಲ್ ಯತ್ನಾಳ್‌ ಅವರು ಮಾತನಾಡಲು ಸರ್ವ ಸ್ವತಂತ್ರರು. ನಾನು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ. ವರಿಷ್ಠರಿಗೂ ದೂರು ನೀಡುವುದಿಲ್ಲ ಎಂದರು.

ಕೇಂದ್ರ ನಾಯಕರೊಂದಿಗೆ ಚರ್ಚಿಸಿದ ನಂತರವೇ ಬಿಜೆಪಿ ರಾಜ್ಯ ಘಟಕಕ್ಕೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪದಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಅಳೆದು ತೂಗಿ, ಕೆಲಸ ಮಾಡುವವರಿಗೆ ಆದ್ಯತೆ ನೀಡಿದ್ದಾರೆ. ಹೊಸ ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಯಾರೂ ವಿರೋಧ‍ ಮಾಡಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು