ವಿದ್ಯುತ್‌ ತಂತಿ ತುಳಿದು ತಾಯಿ-ಮಗು ಸಾವು: ಹೆಗ್ಗಣಗಳ ಮೇಲೆ ಆರೋಪ ಹೊರಿಸಿದ ಬೆಸ್ಕಾಂ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ತಾಯಿ-ಮಗು ವಿದ್ಯುತ್‌ ತಂತಿ ತುಳಿದು ದಾರುಣ ಅಂತ್ಯ ಕಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ 5 ಬೆಸ್ಕಾಂ ಅಧಿಕಾರಿಗಳನ್ನು ಆರೋಪಿಗಳೆಂದು ಬಂಧಿಸಿದ್ದರೂ,ವಿಪರ್ಯಾಸವೆಂದರೆ ಅಂತ್ಯಕ್ರಿಯೆಗೂ ಮುನ್ನವೇ ಆರೋಪಿಗಳು ಜೈಲಿಂದ ಬಿಡುಗಡೆ ಆಗಿದ್ದರು. ಆದರೆ,ಇದೀಗ ತಾಯಿ-ಮಗುವಿನ ಅಂತ್ಯಕ್ಕೆ ಇಲಿಗಳೇ ಕಾರಣವೆಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ಹೇಳಿದ್ದಾರೆ.

ವಿದ್ಯುತ್‌ ತಂತಿ ತುಳಿದು ದುರಂತ ಅಂತ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ‘ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿಯ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕ ಮಹಂತೇಶ್‌ ಬೀಳಗಿ ವೈಟ್‌ಫೀಲ್ಡ್‌ನ ಓಫಾರ್ಮ್‌ ರಸ್ತೆಯ ಬಳಿಯ ಟ್ರನ್ಸ್ ಫಾರ್ಮರ್ ಒಳಗೆ ಹೆಗ್ಗಣ ನುಗ್ಗಿತ್ತು. ಈ ಹೆಗ್ಗಣವೇ ವೈರ್‌ ಕಡಿದು ತಂತಿ ತುಂಡಾಗಿ ಬೀಳುವಂತೆ ಮಾಡಿದೆ ಎಂದು ಹೇಳಿದ್ದಾರೆ. ಬೆಳಗ್ಗೆ 3 ಗಂಟೆಯಿಂದ 4.50ರವರೆಗೆ ವಿದ್ಯುತ್‌ ಸಂಪರ್ಕ ಕಡಿತವಾಗಿತ್ತು. ಆದರೆ, ಪುನಃ 5 ಗಂಟೆ ಸುಮಾರಿಗೆ ವಿದ್ಯುತ್‌ ಪ್ರಸರಣಕ್ಕೆ ರಿಚಾರ್ಜ್‌ ಮಾಡಲಾಗಿದೆ. ಇದೇ ವೇಳೆ ಬಸ್‌ ಇಳಿದು ಇದೇ ದಾರಿಯಲ್ಲಿ ನಡೆದುಕೊಂಡು ಬಂದ ತಾಯಿ ವಿದ್ಯುತ್‌ ಪ್ರಸರಣವಿದ್ದ ತಂತಿಯನ್ನು ತುಳಿದಿದ್ದಾಳೆ. ತಾಯಿ- ಜೊತೆಗೆ ಅವರು ಎತ್ತಿಕೊಂಡಿದ್ದ 9 ತಿಂಗಳ ಮಗುವಿಗೂ ಕೂಡ ಕರೆಂಟ್‌ ಶಾಕ್‌ ಆಗಿದೆ ಎಂದರು.ತಮ್ಮ ಪಾಡಿಗಿದ್ದ ಕುಟುಂಬ ಬೆಸ್ಕಾಂ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ತಾಯಿ-ಮಗು ಈ ದುರಂತಕ್ಕೆ ಅಂತ್ಯ ಕಂಡಿದ್ದಾರೆ.ತಮಿಳುನಾಡಿಗೆಂದು ತನ್ನ ತಾಯಿ ಮನೆಗೆ ಗಂಡ-ಮಗುವಿನೊಂದಿಗೆ ಹೋಗಿದ್ದಳು.ಶನಿವಾರ ಬಸ್‌ ಹತ್ತಿಕೊಂಡು ಬೆಂಗಳೂರಿನ ವೈಟ್‌ಫೀಲ್ಡ್ಗೆ ಬಂದು ಭಾನುವಾರ ಬೆಳ್ಳಂಬೆಳಗ್ಗೆ ಇಳಿದಿದ್ರು.ಮುಂಜಾವಿನಲ್ಲಿ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ತಾಯಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿಯನ್ನು ತುಳಿದರು.ಕೂಡಲೇ ಕರೆಂಟ್‌ ಶಾಕ್‌ನಿಂದ ಕುಸಿದು ಪುನಃ ತಂತಿ ಮೇಲೆ ಬಿದ್ದ ತಾಯಿ ಹಾಗೂ ಮಗುವಿನ ಜೀವವನ್ನು ವಿದ್ಯುತ್‌ ತೆಗೆದಿದ್ದಲ್ಲದೇ ಅವರನ್ನು ಸುಟ್ಟು ಕರಕಲಾಗುವಂತೆ ಮಾಡಿತ್ತು. ಆದರೆ ಇದೀಗ ತಾಯಿ-ಮಗುವನ್ನು ಕಳೆದುಕೊಂಡ ಕುಟುಂಬ ದುಃಖದಲ್ಲಿರುವಾಗ ತಪ್ಪು ಮಾಡಿದ ಬೆಸ್ಕಾಂ ಅಧಿಕಾರಿಗಳು ತಮ್ಮ ಕುಟುಂಬದೊಂದಿಗೆ ನೆಮ್ಮದಿಯಿಂದಿದ್ದಾರೆ.

Umesha HS

Recent Posts

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

2 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

13 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

24 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

34 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

46 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

58 mins ago