Bengaluru 22°C
Ad

ಎಂ.ಪಿ ರೇಣುಕಾಚಾರ್ಯ ಪುತ್ರನಿಗೆ ಫೋನ್‌ನಲ್ಲಿ ಕೊಲೆ ಬೆದರಿಕೆ

ಮಾಜಿ ಸಚಿವ, ಹೊನ್ನಾಳಿ ಮಾಜಿ ಶಾಸಕ, ಬಿಜೆಪಿ ಮುಖಂಡ ಎಂಪಿ ರೇಣುಕಾಚಾರ್ಯ ಅವರಿಗೆ ದೂರವಾಣಿ ಮೂಲಕ ಕೊಲೆ ಬೆದರಿಕೆ ಒಡ್ಡಲಾಗಿದೆ. ಮಗನನ್ನೂ ಕೊಲೆ ಮಾಡುತ್ತೇವೆ ಎಂದು ಬೆದರಿಸಲಾಗಿದೆ.

ಬೆಂಗಳೂರು: ಮಾಜಿ ಸಚಿವ, ಹೊನ್ನಾಳಿ ಮಾಜಿ ಶಾಸಕ, ಬಿಜೆಪಿ ಮುಖಂಡ ಎಂಪಿ ರೇಣುಕಾಚಾರ್ಯ ಅವರಿಗೆ ದೂರವಾಣಿ ಮೂಲಕ ಕೊಲೆ ಬೆದರಿಕೆ ಒಡ್ಡಲಾಗಿದೆ. ಮಗನನ್ನೂ ಕೊಲೆ ಮಾಡುತ್ತೇವೆ ಎಂದು ಬೆದರಿಸಲಾಗಿದೆ.

ಇಂದು ಬೆಳಗ್ಗೆ ಬೆದರಿಕೆ ಕರೆ ಬಂದಿದ್ದು, ʼನಿನಗೂ ನಿನ್ನ ಮಗನಿಗೂ ಇವತ್ತು ರಾತ್ರಿ ಒಳಗೆ ಮುಗಿಸ್ತೀವಿʼ ಎಂದು ಕರೆ ಮಾಡಿದವರು ಬೆದರಿಸಿದ್ದಾರೆ. 912250155161 ಹಾಗೂ 60695539248 ನಂಬರ್‌ಗಳಿಂದ ಕರೆ ಮಾಡಲಾಗಿದೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ಈ ಸರ್ಕಾರ ರೈತ ವಿರೋಧಿ ಸರ್ಕಾರ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರೈತರ ಆತ್ಮಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ ಎಂದು ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರ ಹಿಡಿದ ಸಂದರ್ಭದಿಂದ ಇಲ್ಲಿಯವರೆಗೆ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಆತ್ಮಹತ್ಯೆಗೆ ಕಾರಣ ಕಂಡುಹಿಡಿದು ಸಾಲ ಮನ್ನಾ ಮಾಡುವುದು ಸೇರಿದಂತೆ ರೈತಪರ ಯೋಜನೆಗಳನ್ನು ರೂಪಿಸಬೇಕು ಎಂದಿದ್ದಾರೆ.

Ad
Ad
Nk Channel Final 21 09 2023
Ad