News Karnataka Kannada
Monday, April 29 2024
ಬೆಂಗಳೂರು

ರಾಜ್ಯದ 4 ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸಲು ನಿರ್ಧಾರ

Decision to rename 4 airports in the state
Photo Credit : News Kannada

ಬೆಂಗಳೂರು: ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸುವ ನಿರ್ಣಯವನ್ನು ಕರ್ನಾಟಕ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಮಂಡಿಸಿದ ನಿರ್ಣಯಕ್ಕೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರು ಒಮ್ಮತದಿಂದ ಅಂಗೀಕಾರ ನೀಡಿದ್ದಾರೆ.

ನಿರ್ಣಯದ ಪ್ರಕಾರ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಡಾ.ಕೆ.ವಿ.ಪುಟ್ಟಪ್ಪ (ಕುವೆಂಪು) ಹಾಗೂ ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಜಗದ್ಜ್ಯೋತಿ ಬಸವೇಶ್ವರ ಹೆಸರಿಸಲು ನಿರ್ಧರಿಸಲಾಗಿದೆ.

ಪ್ರತಿಪಕ್ಷ ನಾಯಕ ಆರ್‌. ಅಶೋಕ್‌, ಬಿಜೆಪಿಯ ಬಸನಗೌಡ ಪಾಟೀಲ್‌ ಯತ್ನಾಳ್‌, ಅರವಿಂದ ಬೆಲ್ಲದ್‌, ಆರಗ ಜ್ಞಾನೇಂದ್ರ, ಕಾಂಗ್ರೆಸ್‌ನ ಅಬ್ಬಯ್ಯ ಪ್ರಸಾದ್‌ ಸೇರಿದಂತೆ ಹಲವರು ಸ್ವಾಗತಿಸಿದರು.

ಬಿಜೆಪಿಯ ವಿ.ಸುನೀಲ್‌ ಕುಮಾರ್‌, ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡಬೇಕು ಎಂದು ಆಗ್ರಹಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಎಂ.ಬಿ. ಪಾಟೀಲ್‌, ”ಮಂಗಳೂರು, ಮೈಸೂರು, ಕಲಬುರಗಿ ವಿಮಾನ ನಿಲ್ದಾಣಕ್ಕೆ ಗಣ್ಯರ ಹೆಸರಿಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು,” ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು