ಬೆಂಗಳೂರು

ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಹಿರಿಯ ರಾಜಕೀಯ ಮುತ್ಸದ್ದಿ, ದೇಶದ ಪ್ರಧಾನಿ ಪಟ್ಟಕ್ಕೆ ಏರಿದ ಮೊದಲ ಕನ್ನಡಿಗ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ. ನಾಲ್ವಡಿಯವರು ನಾಡಿನ ಅಭ್ಯುದಯದ ಕನಸು ಕಂಡವರು. ಅವರ ಆಶಯದಂತೆ ನಾಡಿನಲ್ಲಿ ಕೈಗಾರಿಕಾ ಕ್ಷೇತ್ರ, ಕೃಷಿ, ನೀರಾವರಿ, ವಿದ್ಯುಚ್ಛಕ್ತಿ, ಹಿಂದುಳಿದ ವರ್ಗಗಳ ಕಲ್ಯಾಣ, ಸಾಮಾಜಿಕ ನ್ಯಾಯ, ಮಹಿಳಾ ಸಬಲಿಕರಣ, ಗ್ರಾಮ ನೈರ್ಮಲೀಕರಣ, ವೈದ್ಯಕೀಯ ಕ್ಷೇತ್ರ, ನೀರಿನ ಸೌಕರ್ಯ, ಸಾರಿಗೆ ಸೌಲಭ್ಯ, ವ್ಯಾಪಾರ ಸೇರಿದಂತೆ ನಾಡಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಗಣನೀಯ ಸಾಧನೆ ಮಾಡಿರುವ ಗಣ್ಯರೊಬ್ಬರಿಗೆ ಪ್ರತಿ ವರ್ಷ ಪ್ರಸ್ತುತ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿʼಯನ್ನು ನೀಡಬೇಕು ಎನ್ನುವ ಮೂಲ ಆಶಯ ಈ ದತ್ತಿ ಪ್ರಶಸ್ತಿಯದ್ದಾಗಿದೆ. ಪ್ರಶಸ್ತಿಯು 51,000/- ರೂ. ನಗದು, ಸ್ಮರಣಿಕೆ, ಫಲ ತಾಂಬೂಲಗಳನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.

ಇದುವರೆಗೂ ನಾಡಿನ 12 ಜನ ಗಣ್ಯರಿಗೆ ಪರಿಷತ್ತಿನ ಪ್ರತಿಷ್ಠಿತ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿʼ ಪ್ರಧಾನ ಮಾಡಲಾಗಿದೆ. ಈ ಬಾರಿಯ ಆಯ್ಕೆ ಸಮಿತಿಯು ಮಾಜಿ ಪ್ರಧಾನಿಯಾಗಿದ್ದ ಎಚ್.ಡಿ.ದೇವೇಗೌಡ ಅವರಿಗೆ 2022ನೆಯ ಸಾಲಿನ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನಾಡಿನ ಮುಖ್ಯಮಂತ್ರಿ ಸ್ಥಾನದಲ್ಲಿ ಇರುವಾಗ ಕನ್ನಡ ಸಾಹಿತ್ಯ ಪರಿಷತ್ತಿಗೂ ಅಪಾರ ಕೊಡುಗೆಗಳನ್ನು ನೀಡಿದ್ದರು.

Sneha Gowda

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

12 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

35 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

51 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago