Ad

ಹಣ ಸುಲಿಗೆ ಪ್ರಕರಣ : ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಕೇರಳದಲ್ಲಿ ಬಂಧನ!

'ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು' ಎಂದು ಹೇಳಿ ವೈರಲ್‌ ಆಗಿದ್ದ ನಿರೂಪಕಿ ದಿವ್ಯ ವಸಂತ ಅವರು ಇತ್ತೀಚೆಗೆ ಬ್ಲ್ಯಾಕ್‌ಮೇಲ್ ಮಾಡಿ ಹಲವು ಕಡೆ ಹಣ ಸುಲಿಗೆ ಮಾಡಿರುವ ಆರೋಪದಲ್ಲಿ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಬಂಧನವಾಗಿದೆ. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ‘ಇಡೀ ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್‌ ಆಗಿದ್ದ ನಿರೂಪಕಿ ದಿವ್ಯ ವಸಂತ ಅವರು ಇತ್ತೀಚೆಗೆ ಬ್ಲ್ಯಾಕ್‌ಮೇಲ್ ಮಾಡಿ ಹಲವು ಕಡೆ ಹಣ ಸುಲಿಗೆ ಮಾಡಿರುವ ಆರೋಪದಲ್ಲಿ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತ ಬಂಧನವಾಗಿದೆ. ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.

Ad
300x250 2

ದಿವ್ಯ ವಸಂತ ಮತ್ತು ಗ್ಯಾಂಗ್ ನಿಂದ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಪ್ರಕರಣ ಇದಾಗಿದ್ದು, ಈ ಕೇಸ್‌ ನಲ್ಲಿ ತಮ್ಮನ ಬಂಧನ ನಂತರ ಪರಾರಿಯಾಗಿ ತಲೆಮರೆಸಿಕೊಂಡಿದ್ದ ದಿವ್ಯ ವಸಂತ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.

ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದಿವ್ಯ ತಮಿಳುನಾಡಿನಿಂದ ಕೇರಳದಲ್ಲಿ ತಲೆ ಮರೆಸಿಕೊಂಡಿದ್ದಳು. ಸದ್ಯ ಕೇರಳದಿಂದ ಬಂಧಿಸಿ ಕರೆತಂದಿರುವ ಜೀವನ್ ಭೀಮಾನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Ad
Ad
Nk Channel Final 21 09 2023
Ad