ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರು ನಾಳೆ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರಿನ ಲೋಕಭವನದ ಆವರಣದಲ್ಲಿರುವ ಭವ್ಯ ಗಾಜಿನಮನೆಯಲ್ಲಿ ಸಂಜೆ 4:05 ರ ಶುಭ ಮುಹೂರ್ತದಲ್ಲಿ ಈ ಐತಿಹಾಸಿಕ ಪದಗ್ರಹಣ ಸಮಾರಂಭ ನೆರವೇರಲಿದೆ. ನಾಳೆಯ ಭವ್ಯ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಗಳು, ಸಿನೆಮಾ ರಂಗದ ಖ್ಯಾತ ತಾರೆಯರು, ನೂತನ ಶಾಸಕರು, ಮಾಜಿ ಸಚಿವರು ಹಾಗೂ ರಾಜತಾಂತ್ರಿಕ ಗಣ್ಯರು ಭಾಗವಹಿಸಲಿದ್ದಾರೆ.
ಭದ್ರತೆ ಮತ್ತು ಆಸನದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಸಂಘಟಕರು ಮೂರು ವಿಭಿನ್ನ ಶ್ರೇಣಿಯ ವಿಶೇಷ ಪ್ರವೇಶ ಪಾಸ್‌ಗಳನ್ನು ವಿತರಿಸಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.
ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಮುಖ ನಾಯಕರ ಕುಟುಂಬಗಳು, ಬೆಂಬಲಿಗರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಇರಲಿದೆ. ಅತಿ ಗಣ್ಯರು, ಗಣ್ಯರು ಹಾಗೂ ಸಾಮಾನ್ಯರಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಇರಲಿದ್ದು, ಮಧ್ಯಾಹ್ನ 2 ಗಂಟೆ ಒಳಗಾಗಿ ಲೋಕಭವನಕ್ಕೆ ಬರುವಂತೆ ಸೂಚನೆ ನೀಡಲಾಗಿದೆ.
ಯಾವುದೇ ಆಡಂಭರವಿಲ್ಲದೆ ಸರಳವಾಗಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಇನ್ನು ನಾಳೆ ನಡೆಯಲಿರುವ ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಕೂಡ ವೀಕ್ಷಿಸಿದ್ದಾರೆ.

