ಬೆಂಗಳೂರು: ಮೇಕೆದಾಟು ಯೋಜನೆ ರಾಜ್ಯಕ್ಕೆ ಅತ್ಯಗತ್ಯವಾಗಿದ್ದು, ಈ ಬಗ್ಗೆ ರಾಜ್ಯದ ಎಲ್ಲ ಪಕ್ಷಗಳೂ ಅಚಲ ನಿರ್ಧಾರ ಪ್ರಣಾಳಿಕೆಯಲ್ಲಿ ಪ್ರಕಟಿಸಲಿ. ರಾಜ್ಯದ ಎಲ್ಲ ಪಕ್ಷಗಳೂ ಒಟ್ಟಿಗೆ ಹೆಜ್ಜೆಯಿಡಬೇಕು ಎಂದಿದ್ದ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಡಿಸಿಎಂ ಶಿವಕುಮಾರ್, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನಾವು ಮಾಡಿದ “ನಮ್ಮ ನೀರು, ನಮ್ಮ ಹಕ್ಕು” ಹೋರಾಟಕ್ಕೆ ಮಾಜಿ ಪ್ರಧಾನಿ ದೇವೇಗೌಡ ಅವರು ಧ್ವನಿಗೂಡಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತರಬೇಕೆಂಬ ಸಂಕಲ್ಪದಿಂದಲೇ ನಾನು ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಮೇಕೆದಾಟು ಯೋಜನೆಗಾಗಿ ಕಾನೂನು ಹೋರಾಟ ಮುಂದುವರೆದಿದೆ. ನಮಗೆ ಗೆಲುವು ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಈ ಸಂದರ್ಭದಲ್ಲಿ ದೇವೇಗೌಡರು ನಮ್ಮ ಹೋರಾಟಕ್ಕೆ ಧ್ವನಿಗೂಡಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ