Ad

ರಾಜಕಾರಣದ ಸುದ್ದಿಗೆ ನೀವು ಬರಬೇಡಿ ಎಂದು ಸ್ವಾಮೀಜಿಗಳಿಗೆ ಡಿಸಿಎಂ ಮನವಿ

ಸಿಎಂ, ಡಿಸಿಎಂ ವಿಚಾರವಾಗಿ ಬಹಿರಂಗ ಚರ್ಚೆ ಬೇಡ. ಪಕ್ಷವನ್ನು ಎಷ್ಟು ಕಷ್ಟಪಟ್ಟು ಅಧಿಕಾರಕ್ಕೆ ತಂದಿದ್ದೇವೆ.

ಬೆಂಗಳೂರು: ಸಿಎಂ, ಡಿಸಿಎಂ ವಿಚಾರವಾಗಿ ಬಹಿರಂಗ ಚರ್ಚೆ ಬೇಡ. ಪಕ್ಷವನ್ನು ಎಷ್ಟು ಕಷ್ಟಪಟ್ಟು ಅಧಿಕಾರಕ್ಕೆ ತಂದಿದ್ದೇವೆ. ನಿಮ್ಮ ಬಾಯಿಗೆ ಬೀಗ ಹಾಕಿ, ಇಲ್ಲದಿದ್ದರೆ ಪಕ್ಷದಿಂದ ನೋಟಿಸ್ ಜಾರಿ ಮಾಡಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಪಕ್ಷದ ಶಾಸಕರು, ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

Ad
300x250 2

ರಾಜಕಾರಣದ ಸುದ್ದಿಗೆ ನೀವು ಬರಲು ಹೋಗಬೇಡಿ ಎಂದು ಸ್ವಾಮೀಜಿಗಳಿಗೆ ಡಿಸಿಎಂ ಮನವಿ ಮಾಡಿಕೊಂಡಿದ್ದಾರೆ. ಎಲ್ಲಾ ಸ್ವಾಮೀಜಿಗಳಿಗೂ ಕೈ ಮುಗಿಯುವೆ. ಚಂದ್ರಶೇಖರ್ ಸ್ವಾಮೀಜಿ ನನ್ನ ಮೇಲಿನ ಅಭಿಮಾನದಿಂದ ಮಾತನಾಡಿದ್ದಾರೆ. ನಿನ್ನೆ ನಾವೆಲ್ಲ, ಎಂಪಿ ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇವೆ. ಎಲ್ಲರೂ ಕೂಡ ಬಂದಿದ್ದರು, ಮುಕ್ತವಾಗಿ ಮಾತಾಡಿದ್ದೇವೆ ಎಂದರು.

ರಾಜ್ಯದಲ್ಲಿ ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ನಾನು ಖರ್ಗೆ ಹಾಗೂ ಸಿದ್ದರಾಮಯ್ಯ ಕೂತು ಪಕ್ಷದ ಹಿತದೃಷ್ಟಿಯಿಂದ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಎಂಎಲ್ಎ ಕೂಡ ಮಾತಾಡುವ ಅವಶ್ಯಕತೆ ಇಲ್ಲ. ಎಐಸಿಸಿಯವರು, ನಾನೂ ವಿಧಿಯಿಲ್ಲದೇ ನೋಟಿಸ್ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Ad
Ad
Nk Channel Final 21 09 2023
Ad