News Karnataka Kannada
Monday, April 15 2024
Cricket
ಬೆಂಗಳೂರು

ನೀವು ಯಾರಿಗೂ ಲಂಚ ಕೊಡಬೇಡಿ, ನೀವು ಲಂಚ ತಗೋ ಬೇಡಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ

Don't bribe anyone, don't take bribe: Dcm to officials
Photo Credit : Facebook

ಬೆಂಗಳೂರು: ನಮ್ಮ ಸರ್ಕಾರವನ್ನು ಜನತೆ ಸುಮ್ಮನೆ ಆಯ್ಕೆ ಮಾಡಿಲ್ಲ. ಉತ್ತಮ ಆಡಳಿತ ಕೊಡ್ತೀವಿ ಅಂತ ಆಯ್ಕೆ ಮಾಡಿದ್ದಾರೆ. ಬಿಜೆಪಿ ಆಡಳಿತ ವೈಖರಿಯನ್ನು ನೋಡಿದ್ದಾರೆ. ಅದು ಜನರಿಗೆ ಹತ್ತಿರವಾಗುವ ಆಡಳಿತವಲ್ಲ, ಕರೆಪ್ಷನ್ ಕ್ಯಾಪಿಟಲ್ ಎಂಬ ಕಾರಣಕ್ಕೆ ಬಿಜೆಪಿ ಬದಲಾಯಿಸಿ ನಮ್ಮನ್ನು ಅಧಿಕಾರದಲ್ಲಿ ಕೂರಿಸಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ರಾಮನಗರ ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ‘ಎಷ್ಟು ಮಂದಿ ಹೆಡ್ ಕ್ವಾರ್ಟರ್ಸ್ ನಲ್ಲಿ ಮನೆ ಮಾಡಿದ್ದೀರಿ, ಕೈ ಎತ್ತಿ. ನಿಮಗೆ ಒಂದು ತಿಂಗಳು ಅವಕಾಶ ಕೊಡ್ತೀನಿ. ಹೆಡ್ ಕ್ವಾರ್ಟರ್ಸ್ ನಲ್ಲೇ ಇದ್ದು ಕೆಲಸ ಮಾಡಬೇಕು. ಹೆಡ್ ಕ್ವಾರ್ಟರ್ಸ್ ಬಿಟ್ಟು ಹೋದರೆ ಡಿಸಿ ಅವರು ನಮಗೆ ಮಾಹಿತಿ ಕೊಡಬೇಕು. ಗ್ರಾಪಂ ನಿಂದ ಜಿಲ್ಲಾಮಟ್ಟದ ಅಧಿಕಾರಿವರೆಗೆ ಎಲ್ಲರೂ ಕೇಂದ್ರಸ್ಥಾನದಲ್ಲೇ ಉಳಿದುಕೊಂಡು ಕೆಲಸ ಮಾಡಬೇಕು’ ಎಂದು ಅವರು ಹೇಳಿದರು.

ನೀವು ಯಾರಿಗೂ ಲಂಚ ಕೊಡಬೇಡಿ. ನೀವು ಲಂಚ ತಗೋ ಬೇಡಿ. ನಾನು ಯಾರನ್ನು ವರ್ಗಾವಣೆ ಮಾಡಿಸೋಲ್ಲ. ನಿಮ್ಮತ್ರ ಯಾವ ರೀತಿ ಕೆಲಸ ಮಾಡಿಸಬೇಕು ಎಂದು ಗೊತ್ತಿದೆ. ಔಟ್ ಆಫ್ ದಿ ವೇ ಹೋಗಬೇಡಿ’ ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು