News Karnataka Kannada
Sunday, May 05 2024
ಬೆಂಗಳೂರು

ಹಣ ಹಾಕುವ ಡೋಂಘಿ ರಾಜಕಾರಣ ಬೇಡ: ಬಿಜೆಪಿ ರಾಜ್ಯಾಧ್ಯಕ್ಷ ಖಂಡನೆ

Kalladka flyover to be completed by December: Disha committee
Photo Credit : News Kannada

ಬೆಂಗಳೂರು: ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲು ಹಣ ಕೊಡುವ ಕಾಂಗ್ರೆಸ್ ಸರಕಾರದ ನಿರ್ಧಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಂಡನೆ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ವಚನ ಭ್ರಷ್ಟ ಸರಕಾರವಾಗಿದೆ. ಅಕ್ಕಿ ಕೊಡದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಚುನಾವಣಾ ಪೂರ್ವದಲ್ಲಿ 10 ಕೆ.ಜಿ ಅಕ್ಕಿ ಅಂದಿದ್ರು. ನಮ್ಮದು ಸೇರಿ ಒಟ್ಟು 15 ಕೆ.ಜಿ ಅಕ್ಕಿ ಕೊಡಬೇಕಿತ್ತು. ಈವಾಗ ಅಕ್ಕಿಗೆ ಹಣ ಹಾಕೋಕೆ ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಣ ಏನು ತಿನ್ನೋಕೆ ಆಗುತ್ತಾ ಅಂತಾ ಈ ಹಿಂದೆ ಸಿದ್ದರಾಮಯ್ಯ ಹೇಳಿದ್ರು. ನಿಮಗೆ ಶಕ್ತಿ ಇದ್ರೆ 10 ಅಕ್ಕಿ ಕೊಡಬೇಕು. ಹಣ ಹಾಕುವ ಡೋಂಘಿ ರಾಜಕಾರಣ ಸರಿಯಲ್ಲ. ಇದನ್ನು ನಾವು ಖಂಡಿಸುತ್ತೇವೆ. ಕಾಂಗ್ರೆಸ್ ಸರಕಾರ ನುಡಿದಂತೆ ನಡೆಯಬೇಕು. ಇಲ್ಲವಾದಲ್ಲಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು