ಬೆಂಗಳೂರು: ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ. ಕೊಟ್ಟೇ ಕೊಡುತ್ತೇವೆ ಆದ್ರೆ ಕೇಂದ್ರದಲ್ಲಿ ಏನು ಷರತ್ತುಗಳು ಹಾಕ್ತಾರೋ ಗೊತ್ತಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು ಪ್ರಧಾನ ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಕಚೇರಿ ಮುಂದೆ ಮಹಿಳೆಯರು ಕ್ಯೂ ನಿಂತಿದ್ದ ವಿಚಾರಕ್ಕೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದ್ರೆ ಕೊಟ್ಟ ಮಾತಿನಂತೆ ಪ್ರತಿ ವರ್ಷ ಮಹಿಳೆಯರ ಖಾತೆಗೆ ಒಂದು ಲಕ್ಷ ರೂ. ಹಣ ಜಮೆ ಮಾಡುತ್ತೇವೆ. ನಮ್ಮ ಗ್ಯಾರಂಟಿ ಬಗ್ಗೆ ಹೆಣ್ಣು ಮಕ್ಕಳಿಗೆ ಎಷ್ಟು ನಂಬಿಕೆ ಅಂತ ಗೊತ್ತಾಗುತ್ತಿದೆ. ರಾಹುಲ್ ಗಾಂಧಿ ಅವರು ಸಹ ಹೇಳಿರುವುದಾಗಿ ತಿಳಿಸಿದ್ದಾರೆ.
ಈಗಾಗಲೇ ಗ್ಯಾರಂಟಿ ಘೋಷಿಸಲಾಗಿದೆ. ಆದ್ರೆ ಏನು ಷರತ್ತುಗಳು ಹಾಕ್ತಾರೋ ಗೊತ್ತಿಲ್ಲ. ನಮ್ ಕಂಡಿಷನ್ ಗೊತ್ತಿದೆಯಲ್ಲವಾ? ಅಂತಾ ಹೇಳಿದ್ದಾರೆ.

