ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ಡಾ.ಚಂದ್ರ ಪೂಜಾರಿ ನೇಮಕ

ಬೆಂಗಳೂರು: ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ , ಲೇಖಕ , ಚಿಂತಕ ಡಾ.ಚಂದ್ರ ಪೂಜಾರಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.

ಧಾರವಾಡದಲ್ಲಿ ಕೇಂದ್ರ ಸ್ಥಾನವನ್ನು ಹೊಂದಿರುವ ಉನ್ನತ ಶಿಕ್ಷಣ ಅಕಾಡೆಮಿಯು ರಾಜ್ಯದ ಉನ್ನತ ಶಿಕ್ಷಣದ ನೀತಿ ನಿರೂಪಣೆಯನ್ನು ಸಿದ್ಧಗೊಳಿಸುವಲ್ಲಿ ಸರಕಾರಕ್ಕೆ ಸಲಹೆ , ಮಾರ್ಗಸೂಚಿಗಳನ್ನು ನೀಡುವ ಅತ್ಯುನ್ನತ ಸಂಸ್ಥೆಯಾಗಿದೆ.

ಡಾ.ಚಂದ್ರ ಪೂಜಾರಿ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ ಹಾಗೂ ಹಾವೇರಿ ಜಾನಪದ ವಿಶ್ವವಿದ್ಯಾಲಯದ ಅನ್ವಯಿಕ ಜಾನಪದ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸಿದ್ದಾರೆ.

ಸಮಾಜ ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ಡಾ.ಚಂದ್ರ ಪೂಜಾರಿ ಅವರು ಪ್ರಥಮ ಬಾರಿಗೆ ರಾಜ್ಯದಲ್ಲಿ ದಲಿತ್ ಡೆವೆಲಪ್ಮೆಂಟ್ ಇಂಡೆಕ್ಸ್ ಸಿದ್ಧಗೊಳಿಸಿದ ತಜ್ಞರಾಗಿದ್ದಾರೆ.‌

ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕೋರ್ ಕಮಿಟಿ ಸದಸ್ಯರಾಗಿ, ಸ್ಟೇಟ್ ಹ್ಯೂಮನ್ ಡೆವಲಪ್ಮೆಂಟ್ ಇಂಡೆಕ್ಸ್ ಕೋರ್ ಕಮಿಟಿ ಸದಸ್ಯರರಾಗಿ , ರಾಜ್ಯ ಆಡಳಿತ ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ, ಮೈಸೂರಿನ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದ್ದರು.

ಒಟ್ಟು 22 ಕೃತಿಗಳನ್ನು ಬರೆದಿರುವ ಡಾ.ಚಂದ್ರ ಪೂಜಾರಿ ಅವರು , ವಿಜಯ ಕರ್ನಾಟಕ , ಕನ್ನಡ ಪ್ರಭ ಪತ್ರಿಕೆಯ ಅಂಕಣಗಾರರಾಗಿ, ಪ್ರಜಾವಾಣಿ ಪತ್ರಿಕೆಯ ಲೇಖಕರಾಗಿ ನಿರಂತರವಾಗಿ ಬರವಣಿಗೆಯಲ್ಲಿ ತೊಡಗಿಸಿಕೊಂಡವರು.‌ ರಾಜ್ಯದ ವಿವಿಧ ಟಿ.ವಿ.ಮಾಧ್ಯಮಗಳಲ್ಲಿ ನಿರಂತರವಾಗಿ ವಿಚಾರ ಮಂಡನೆ ಮಾಡುತ್ತಿರುವರಾಗಿದ್ದಾರೆ.

ಪುತ್ತೂರು ತಾಲೂಕಿನವರಾದ ಚಂದ್ರ ಪೂಜಾರಿ ಅವರು, ಸೈಂಟ್ ಪಿಲೋಮಿನಾ ಹೈಸ್ಕೂಲ್ , ಹಾಗೂ ಸೈಂಟ್ ಪಿಲೋಮಿನಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು . ಎಂ.ಕಾಮ್ ಅಧ್ಯಯನವನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಸಿದ್ದರು, ಇದೇ ವಿಶ್ವವಿದ್ಯಾಲಯದಲ್ಲಿ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಷಯದಲ್ಲಿ ಪಿ.ಎಚ್.ಡಿ ಪದವಿ ಪಡೆದಿದ್ದರು.‌

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago