ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪದ ಮೇಲೆ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯರನ್ನ ಅನರ್ಹಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜಾಗೃತಿ ಕಾರ್ಯಕ್ರಮಗಳ ಹೆಸರಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಂತಾ ಎ ತಿಮ್ಮಯ್ಯ ಅವರು ಕಾಯ್ದೆಗಳ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರ ನೇಮಿಸಿದ್ದ ತನಿಖಾ ಸಮಿತಿ ವರದಿಯಲ್ಲಿ ಬಟಾಬಯಲಾಗಿತ್ತು.
ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪ ಶಾಂತಾ ಎ ತಿಮ್ಮಯ್ಯ ಅವರ ಮೇಲಿತ್ತು.
ಇತ್ತೀಚೆಗೆ ಕರ್ನಾಟಕ ಹೈಕೋರ್ಟ್ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಡಾ. ಶಾಂತ್ ಎ ತಿಮ್ಮಯ್ಯ ಮುಂದುವರೆಸುವಂತೆ ಹೇಳಿ ಆದೇಶ ಹೊರಡಿಸಿತ್ತು. ಆದರೆ ಅದರ ಬೆನ್ನೆಲ್ಲೇ ಇದೀಗ ರಾಜ್ಯ ಸರ್ಕಾರ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ.
ಕೆಎಸ್ಪಿಸಿಬಿಯ ಹಿಂದಿನ ಸದಸ್ಯ ಕಾರ್ಯದರ್ಶಿ ಸೂರಿ ಪಾಯಲ್ ಈ ಸಂಬಂಧ ಸರ್ಕಾರಕ್ಕೆ ದೂರು ನೀಡಿದ್ದರು. ದೂರಿನನ್ವಯ ಸರ್ಕಾರ ಸಮಿತಿ ರಚನೆ ಮಾಡಿ ತನಿಖೆಗೆ ಸೂಚಿಸಿತ್ತು. ತನಿಖೆಯ ವರದಿಯಲ್ಲಿ ಶಾಂತಾ ಎ ತಿಮ್ಮಯ್ಯ ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಸಾಬೀತಾಗಿತ್ತು.