Bengaluru 21°C
Ad

ಬೆಂಗಳೂರಿನಲ್ಲಿ ಆಟೋ ದರ ಹೆಚ್ಚಿಸುವಂತೆ ಚಾಲಕರ ಸಂಘ ಒತ್ತಾಯ

ಬೆಂಗಳೂರಿನಲ್ಲಿ ಆಟೋ ಮೀಟರ್‌ ದರ ಹೆಚ್ಚಿಸುವಂತೆ ಆಟೋ ಚಾಲಕರ ಸಂಘ ಒತ್ತಾಯ ಮಾಡಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಆಟೋ ಮೀಟರ್‌ ದರ ಹೆಚ್ಚಿಸುವಂತೆ ಆಟೋ ಚಾಲಕರ ಸಂಘ ಒತ್ತಾಯ ಮಾಡಿದೆ. ಆಟೋ ಚಾಲಕರ ಸಂಘ ಇತ್ತೀಚೆಗೆ ಬೆಂಗಳೂರು ನಗರ ಜಿಲ್ಲಾ ಉಪ ಆಯುಕ್ತರಿಗೆ ಪತ್ರ ಬರೆದು, ಬೆಂಗಳೂರಿನಲ್ಲಿ ಆಟೋ ರಿಕ್ಷಾ ದರವನ್ನು ಸಗಟು ಬೆಲೆ ಸೂಚ್ಯಂಕಕ್ಕೆ ಅನುಗುಣವಾಗಿ ಪರಿಷ್ಕರಿಸಲು ಕೋರಿದೆ.

ಬೆಂಗಳೂರು ನಗರದಲ್ಲಿ ಆಟೋ ಮೀಟರ್ ದರ ಏರಿಕೆ ಮಾಡುವ ಅಧಿಕಾರ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಮಿಟಿಗೆ ಮಾತ್ರ ಅವಕಾಶ ಇರುವುದರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗುತ್ತಿದೆ.

ಮೂರು ವರ್ಷಗಳಿಂದ ಪ್ರಯಾಣ ದರ ಏರಿಕೆಯಾಗದ ಕಾರಣ ಕನಿಷ್ಠ ಆಟೋ ದರವನ್ನು ಕೂಡ ಹೆಚ್ಚಿಸುವಂತೆ ಸಂಘ ಒತ್ತಾಯಿಸಿದೆ. ಈ ಬಗ್ಗೆ ಆದರ್ಶ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಕನಿಷ್ಠ 30 ರುಪಾಯಿ ಇದ್ದು, ಅದನ್ನು 40 ರುಪಾಯಿ ‌ಮಾಡಬೇಕೆಂದು ಮನವಿ ಮಾಡಲಾಗಿದೆ. ಈ ಬಗ್ಗೆ ಮಾತಾನಾಡಿದ ಕೆಲವು ಮಂದಿ ಪ್ರಯಾಣಿಕರು, ಉಳಿದ ಎಲ್ಲಾ ದರ ಹೆಚ್ಚಳವಾದರೆ ಆಟೋ ಚಾಲಕರು ಕೂಡ ದರ ಏರಿಕೆ ಮಾಡಲೇಬೇಕಷ್ಟೆ ಎಂದಿದ್ದಾರೆ.

 

Ad
Ad
Nk Channel Final 21 09 2023
Ad