News Karnataka Kannada
Monday, April 29 2024
ಬೆಂಗಳೂರು

195 ತಾಲೂಕುಗಳಲ್ಲಿ ಬರ ಪರಿಸ್ಥಿತಿ: ಸಚಿವ ಕೃಷ್ಣ ಬೈರೇಗೌಡ

ಕಂದಾಯ ಇಲಾಖೆಯಲ್ಲಿನ ಹಳೆಯ ದಾಖಲೆಗಳು ಶಿಥಿಲಾವಸ್ಥೆ ತಲುಪಿವೆ. ದಾಖಲೆ ಪಡೆಯಲು ಜನರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ಕಂದಾಯ ಇಲಾಖೆ ಎಲ್ಲಾ ಕಚೇರಿಗಳನ್ನು ಶೀಘ್ರದಲ್ಲೇ  ಡಿಜಿಟಲೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು  ಹೇಳಿದರು.
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಕೊರತೆ ತೀವ್ರ ಕೊರತೆಯಾಗಿದ್ದು, ಮಲೆನಾಡು, ಬಯಲುಸೀಮೆ, ಕರಾವಳಿ ಸಹಿತ ಎಲ್ಲ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿದೆ. ಇದರಿಂದ ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿವೆ. ಈ ನಿಟ್ಟಿನಲ್ಲಿ ಸಂಪುಟ ಉಪಸಮಿತಿ ಸಭೆ ನಡೆಯಿತು.

ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಸಂಪುಟ ಉಪಸಮಿತಿ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಗಳು ಇವತ್ತು ಸಂಜೆಯೊಳಗೆ ಅಧಿಕೃತವಾಗಿ ಬರ ಪೀಡಿತ ತಾಲೂಕುಗಳ ಘೋಷಣೆಗೆ ಸಹಿ ಹಾಕಲಿದ್ದಾರೆ. ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ ಘೋಷಣೆಗೆ ಅಧಿಸೂಚನೆ ಹೊರಡಿಸುತ್ತೇವೆ. ಬಳಿಕ 10 ದಿನದಲ್ಲಿ ಕೇಂದ್ರಕ್ಕೆ ವರದಿ ಸಲ್ಲಿಸುತ್ತೇವೆ ಎಂದರು.

ಮೊದಲ ಬರ ಘೋಷಣೆ ಮಾಡಬೇಕು, ಬಳಿಕ ಪರಿಹಾರ ಘೋಷಣೆ ಮಾಡಲಾಗುವುದು. ಮೊದಲು 113 ತಾಲೂಕುಗಳನ್ನು ಆಯ್ಕೆ ಮಾಡಿಕೊಂಡು ಬೆಳೆ ಸಮೀಕ್ಷೆಗೆ ಆದೇಶ ನೀಡಿದ್ದೇವು. 62 ತಾಲೂಕುಗಳಲ್ಲಿ ಬರಕ್ಕೆ ಅರ್ಹ ವಿವರ ಬಂದಿತ್ತು. ಸಚಿವ ಸಂಪುಟದಲ್ಲೂ ವಿಸ್ರೃತ ಚರ್ಚೆಯಾಗಿತ್ತು. ಆಗ 62 ತಾಲೂಕುಗಳು ಮಾತ್ರವಲ್ಲ ಇನ್ನೂ ಹೆಚ್ಚಿನ ತಾಲೂಕುಗಳಲ್ಲಿ ಬರ ಸ್ಥಿತಿ ಇದೆ ಎಂದು ಚರ್ಚೆಯಾಗಿತ್ತು. ಹೀಗಾಗಿ ಉಳಿದ 134 ತಾಲೂಕುಗಳಲ್ಲಿ ಸಮೀಕ್ಷೆ ಮಾಡಲು ಆದೇಶಿಸಿದ್ದೇವು ಎಂದು ತಿಳಿಸಿದರು.

ಈಗ ಎಲ್ಲ ಜಿಲ್ಲೆಗಳಿಂದ ಬೆಳೆ ಸಮೀಕ್ಷೆ ವರದಿ ಬಂದಿದೆ. 161 ತಾಲೂಕುಗಳಲ್ಲಿ ತೀವ್ರವಾದ ಬರ ಪರಿಸ್ಥಿತಿ ಇದೆ. 34 ತಾಲೂಕುಗಳಲ್ಲಿ ಸಾಧಾರಣ ಬರದ ಪರಿಸ್ಥಿತಿ. ಒಟ್ಟು 195 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಉಳಿದ 40 ತಾಲೂಕುಗಳಲ್ಲಿ ಮಳೆ ಕೊರತೆ ಇದ್ದರೂ ಕೂಡ ತೇವಾಂಶ ಕೊರತೆ ಕಂಡು ಬರುತ್ತಿಲ್ಲ. ತನ್ನ ಮಾರ್ಗಸೂಚಿಗಳ ಪ್ರಕಾರ, ಮಧ್ಯಮ ಬರಕ್ಕೆ ಕೇಂದ್ರ ಸರ್ಕಾರ ಪರಿಹಾರ ಕೊಡಬಹುದು ಅಥವಾ ಇಲ್ಲದೇ ಇರಬಹುದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು