195 ತಾಲೂಕುಗಳಲ್ಲಿ ಬರ ಪರಿಸ್ಥಿತಿ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಕೊರತೆ ತೀವ್ರ ಕೊರತೆಯಾಗಿದ್ದು, ಮಲೆನಾಡು, ಬಯಲುಸೀಮೆ, ಕರಾವಳಿ ಸಹಿತ ಎಲ್ಲ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವಿದೆ. ಇದರಿಂದ ಬಿತ್ತನೆ ಮಾಡಿದ ಬೆಳೆಗಳು ಒಣಗುತ್ತಿವೆ. ಈ ನಿಟ್ಟಿನಲ್ಲಿ ಸಂಪುಟ ಉಪಸಮಿತಿ ಸಭೆ ನಡೆಯಿತು.

ರಾಜ್ಯದ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಸಂಪುಟ ಉಪಸಮಿತಿ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಗಳು ಇವತ್ತು ಸಂಜೆಯೊಳಗೆ ಅಧಿಕೃತವಾಗಿ ಬರ ಪೀಡಿತ ತಾಲೂಕುಗಳ ಘೋಷಣೆಗೆ ಸಹಿ ಹಾಕಲಿದ್ದಾರೆ. ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ ಘೋಷಣೆಗೆ ಅಧಿಸೂಚನೆ ಹೊರಡಿಸುತ್ತೇವೆ. ಬಳಿಕ 10 ದಿನದಲ್ಲಿ ಕೇಂದ್ರಕ್ಕೆ ವರದಿ ಸಲ್ಲಿಸುತ್ತೇವೆ ಎಂದರು.

ಮೊದಲ ಬರ ಘೋಷಣೆ ಮಾಡಬೇಕು, ಬಳಿಕ ಪರಿಹಾರ ಘೋಷಣೆ ಮಾಡಲಾಗುವುದು. ಮೊದಲು 113 ತಾಲೂಕುಗಳನ್ನು ಆಯ್ಕೆ ಮಾಡಿಕೊಂಡು ಬೆಳೆ ಸಮೀಕ್ಷೆಗೆ ಆದೇಶ ನೀಡಿದ್ದೇವು. 62 ತಾಲೂಕುಗಳಲ್ಲಿ ಬರಕ್ಕೆ ಅರ್ಹ ವಿವರ ಬಂದಿತ್ತು. ಸಚಿವ ಸಂಪುಟದಲ್ಲೂ ವಿಸ್ರೃತ ಚರ್ಚೆಯಾಗಿತ್ತು. ಆಗ 62 ತಾಲೂಕುಗಳು ಮಾತ್ರವಲ್ಲ ಇನ್ನೂ ಹೆಚ್ಚಿನ ತಾಲೂಕುಗಳಲ್ಲಿ ಬರ ಸ್ಥಿತಿ ಇದೆ ಎಂದು ಚರ್ಚೆಯಾಗಿತ್ತು. ಹೀಗಾಗಿ ಉಳಿದ 134 ತಾಲೂಕುಗಳಲ್ಲಿ ಸಮೀಕ್ಷೆ ಮಾಡಲು ಆದೇಶಿಸಿದ್ದೇವು ಎಂದು ತಿಳಿಸಿದರು.

ಈಗ ಎಲ್ಲ ಜಿಲ್ಲೆಗಳಿಂದ ಬೆಳೆ ಸಮೀಕ್ಷೆ ವರದಿ ಬಂದಿದೆ. 161 ತಾಲೂಕುಗಳಲ್ಲಿ ತೀವ್ರವಾದ ಬರ ಪರಿಸ್ಥಿತಿ ಇದೆ. 34 ತಾಲೂಕುಗಳಲ್ಲಿ ಸಾಧಾರಣ ಬರದ ಪರಿಸ್ಥಿತಿ. ಒಟ್ಟು 195 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಉಳಿದ 40 ತಾಲೂಕುಗಳಲ್ಲಿ ಮಳೆ ಕೊರತೆ ಇದ್ದರೂ ಕೂಡ ತೇವಾಂಶ ಕೊರತೆ ಕಂಡು ಬರುತ್ತಿಲ್ಲ. ತನ್ನ ಮಾರ್ಗಸೂಚಿಗಳ ಪ್ರಕಾರ, ಮಧ್ಯಮ ಬರಕ್ಕೆ ಕೇಂದ್ರ ಸರ್ಕಾರ ಪರಿಹಾರ ಕೊಡಬಹುದು ಅಥವಾ ಇಲ್ಲದೇ ಇರಬಹುದು ಎಂದು ಹೇಳಿದರು.

Ashika S

Recent Posts

ಶಿಕ್ಷಕರಿಗೆ 15 ದಿನಗಳ ರಜೆ ಕಡಿತ : ಎಸ್‌ಎಸ್‌ಎಲ್‌ಸಿ ವಿಶೇಷ ತರಗತಿ ನಡೆಸಲು ಸೂಚನೆ

ರಾಜ್ಯದ ಪ್ರೌಢಶಾಲಾ ಶಿಕ್ಷಕರ 15 ದಿನಗಳ ರಜೆ ಕಡಿತ ಮಾಡಿದ್ದು, ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ…

5 mins ago

ಈ ಜಿಲ್ಲೆಗಳಲ್ಲಿ ಧಾರಕಾರ ಮಳೆ : ಸಿಡಿಲು ಬಡಿದು ಯುವಕ ಸಾವು

ನೆನ್ನೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಧಾರಕಾರವಾಗಿ ಮಳೆ ಸುರಿದು ಭೂಮಿಯನ್ನುವರುಣ ತಂಪಾಗಿಸಿದ್ದಾನೆ  ಆದರೆ ಕೆಲವಡೆ ಅವಾಂತರಗಳಾಗಿವೆ.ಕೃಷ್ಣನ ನಾಡು ಉಡುಪಿಯಲ್ಲೂ ಮಂಗಳವಾರ…

16 mins ago

ಇದು ಮಾವು ಸೀಜನ್‌: ತಾಜಾ ಮಾವಿನ ರಸ ಕುಡಿಯುವುದರಿಂದ ಏನೆಲ್ಲ ಪ್ರಯೋಜನ?

ಈಗ ಮಾವು ಸೀಜನ್‌. ಯಾವ ಹಣ್ಣಿನ ಅಂಗಡಿ ನೋಡಿದರಲ್ಲಿ ಮಾವಿನ ರಾಶಿ ಕಂಡುಬರುತ್ತದೆ. ಆದರೆ ಈಗ ಕೆಲವೊಂದು ಮಾವು ಅಪಾಯಕಾರಿ…

31 mins ago

ರಾಶಿ ಭವಿಷ್ಯ : ಯಾರಿಗೆ ಲಾಭ? ಯಾರಿಗೆ ನಷ್ಟ?

ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 15…

53 mins ago

ಕೊಟ್ಟ ಮಾತಿನಂತೆ ಚಿತ್ರ ಬಿಡಿಸಿದ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ…

9 hours ago

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

9 hours ago