ಮುಂದಿನ ವಾರ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡ್ತೀವಿ ಎಂದ ವಿಜಯೇಂದ್ರ

ಬೆಂಗಳೂರು: ಅಂತು ಇಂತೂ ಅಳೆದೂ ತೂಗಿ ಬಿಜೆಪಿ ಹೈಕಮಾಂಡ್‌ ಕರ್ನಾಟಕಕ್ಕೆ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಮುಂದೆ ಪ್ರತಿಪಕ್ಷ ನಾಯಕನ ಆಯ್ಕೆ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಜ್ಯ ಘಟಕ ಅಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಮುಂದಿನ ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದು ಸಮಾಲೋಚನೆ ನಡೆಸಲಾಗುವುದು. ಎಲ್ಲ ಶಾಸಕರ ಜೊತೆ ಚರ್ಚೆ ನಡೆಸಿ ಪ್ರತಿಪಕ್ಷ ನಾಯಕನ ಆಯ್ಕೆ ಮಾಡಲಾಗುವುದು ಎಂದು ಪಕ್ಷದ ರಾಜ್ಯ ಘಟಕದ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆಗೆ ಕೇಂದ್ರದ ವೀಕ್ಷಕರು ಕೂಡ ಆಗಮಿಸುತ್ತಿದ್ದಾರೆ. ಅವರ ಸಮ್ಮುಖದಲ್ಲೇ ಪ್ರತಿ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆಯಾಗಲಿದೆ ಎಂದು ತಿಳಿಸಿದರು.
ಇನ್ನು, ರಾಜ್ಯಾಧ್ಯಕ್ಷ ಹುದ್ದೆಗೆ ಆಯ್ಕೆಯಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಯಡಿಯೂರಪ್ಪ ಮಗ ಎನ್ನುವ ಕಾರಣಕ್ಕೆ ನನಗೆ ಹುದ್ದೆ ಕೊಟ್ಟಿಲ್ಲ. ಅವರ ಮಗ ಎನ್ನುವ ಹೆಮ್ಮೆ ಇದೆ. ಪಕ್ಷ ಬಿಡುವ ಯೋಚನೆಯಲ್ಲಿ ಇರುವವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದರು.
ಮಾಜಿ ಸಚಿವ ವಿ. ಸೋಮಣ್ಣ, ಆರ್ ಅಶೋಕ್, ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಅವರು ಹೇಳಿದರು.

Umesha HS

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

1 hour ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

1 hour ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

2 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

2 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

2 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

2 hours ago