ನಂದಿ ಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು ಸಂಚಾರ ಆರಂಭ

ಬೆಂಗಳೂರು: ಪ್ರವಾಸಿಗರನ್ನು ಸೆಳೆಯುವ ಉದ್ದೇಶದಿಂದ ಮೆಮು (ಮೇನ್‌ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್) ರೈಲುಗಳ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.

ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ನಡುವೆ ಮೂರು ಜೋಡಿ ಮೆಮು (ಮೇನ್‌ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್) ರೈಲುಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಶತಮಾನದ ಇತಿಹಾಸವಿರುವ ವಿವಿಧ ರೈಲು ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲು ನೈರುತ್ಯ ರೈಲ್ವೆ ಮುಂದಾಗಿದ್ದು, ಮೊದಲ ಹಂತದಲ್ಲಿ ದೊಡ್ಡಜಾಲ, ದೇವನಹಳ್ಳಿ, ಆವತಿಹಳ್ಳಿ ಮತ್ತು ನಂದಿ ಹಾಲ್ಟ್‌ ನಿಲ್ದಾಣಗಳನ್ನು ಆಧುನೀಕರಣಗೊಳಿಸಲಾಗುತ್ತಿದೆ. ಹಳೆಯ ಶೈಲಿಯನ್ನೇ ಉಳಿಸಿಕೊಂಡು, ನಾಲ್ಕೂ ರೈಲು ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಬ್ರಿಟಿಷರ ಕಾಲದಲ್ಲಿ ವಸಾಹತುಶಾಹಿ ಮತ್ತು ಮೈಸೂರು ಶೈಲಿ ವಾಸ್ತುಶಿಲ್ಪಗಳ ಮಿಶ್ರಣಗೊಳಿಸಿ ಹೈಬ್ರಿಡ್‌ ವಾಸ್ತುಶಿಲ್ಪ ಶೈಲಿಯಲ್ಲಿ 107 ವರ್ಷಗಳ ಹಿಂದೆ ಈ ನಾಲ್ಕು ಚಿಕ್ಕ ನಿಲ್ದಾಣಗಳನ್ನು ನಿರ್ಮಿಸಲಾಗಿತ್ತು. ದೊಡ್ಡಜಾಲ, ದೇವನಹಳ್ಳಿ, ಆವತಿಹಳ್ಳಿ ನಿಲ್ದಾಣಗಳು ಒಂದೇ ವಿನ್ಯಾಸ ಹೊಂದಿದ್ದು, ನಂದಿ ಹಾಲ್ಟ್‌ ನಿಲ್ದಾಣ ಮಾತ್ರ ಭಿನ್ನ ವಿನ್ಯಾಸದಲ್ಲಿರಲಿದೆ ಎಂದು ಬೆಂಗಳೂರು ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಕುಸುಮಾ ಹರಿಪ್ರಸಾದ್‌ ಅವರು ಹೇಳಿದ್ದಾರೆ.

ಎರಡು ಮೆಮು ರೈಲುಗಳು ಡಿಸೆಂಬರ್ 11 ರಂದು ಕಂಟೋನ್ಮೆಂಟ್ ರೈಲು ನಿಲ್ದಾಣದಿಂದ ಬೆಳಿಗ್ಗೆ 5.10 ಮತ್ತು 4 ಗಂಟೆಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಯಶವಂತಪುರದಿಂದ ಮೂರನೇ ರೈಲು ಬೆಳಗ್ಗೆ 10.10ಕ್ಕೆ ಆರಂಭವಾಗುತ್ತದೆ. ಈ ರೈಲುಗಳು 1.5 ಗಂಟೆಗಳಲ್ಲಿ ಪ್ರಯಾಣವನ್ನು ಪೂರೈಸುತ್ತವೆ, ಚಿಕ್ಕಬಳ್ಳಾಪುರದವರೆಗೆ ಟಿಕೆಟ್ ದರ 40 ರೂ. ಇರಲಿದೆ ಎಂದು ಮಾಹಿತಿ ನೀಡಿದ್ದಾರೆ.

Ashika S

Recent Posts

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

16 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

23 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

41 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

46 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

1 hour ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

1 hour ago