News Karnataka Kannada
Saturday, April 20 2024
Cricket
ಬೆಂಗಳೂರು

ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್‌ಲೈನ್ ಸೇವೆ ಸೇವೆ ಬಂದ್

Online
Photo Credit : News Kannada

ಬೆಂಗಳೂರು: ಇಂಧನ ಇಲಾಖೆಯ ಸಾಫ್ಟ್​ವೇರ್ ಅಪ್ಡೇಟ್​ ಹಿನ್ನೆಲೆಯಲ್ಲಿ ಮಾರ್ಚ್ 10 ರಿಂದ 19 ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳು ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಇಂಧನ ಇಲಾಖೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಬದಲಾವಣೆ ಸೇರಿದಂತೆ ಯಾವುದೇ ಆನ್ ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ.

ಬೆಸ್ಕಾಂ: ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಸಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರು.

ಸೆಸ್ಕ್: ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆ‌ರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚನ್ನರಾಯಪಟ್ಟಣ.

ಮೆಸ್ಕಾಂ: ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

ಜೆಸ್ಕಾಂ: ಕಲಬುರಗಿ, ಮಾನ್ವಿ, ಸಿಂಧನೂರು, ಬೀದರ್, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್ ಹಾಗೂ ಹೊಸಪೇಟೆ.

ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಯಪುರ ಪಟ್ಟಣದಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

ಆನ್‌ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ. ಸಾಫ್ಟ್​ವೇರ್ ಅಪ್ಡೇಟ್​ ಬಳಿಕ ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟಿಗೆ ವ್ಯತ್ಯಯ ಉಂಟಾಗಬಹುದು ಎಂದು ತಿಳಿಸಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು