ಬೆಂಗಳೂರು: ಇಲ್ಲಿನ ನಾಯಂಡಹಳ್ಳಿ ಫ್ಲೈಓವರ್ ಮೇಲಿನಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನವೀನ್ ಕುಮಾರ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ತನ್ನ ಬೈಕನ್ನ ಫ್ಲೈಓವರ್ ಮೇಲೆ ಪಾರ್ಕಿಂಗ್ ಮಾಡಿ ಏಕಾಏಕಿ ಕೆಳಗೆ ಜಿಗಿದಿದ್ದಾನೆ.
ಕಳೆದ 3-4 ತಿಂಗಳಿನಿಂದ ಕರ್ನಾಟಕ ವಿದ್ಯುತ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನವೀನ್, ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟಿದ್ದಾನೆ. ಬಳಿಕ ಫ್ಲೈಓವರ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ನವೀನ್ 2 ತಿಂಗಳ ಹಿಂದೆ ಮದುವೆಯಾಗಿದ್ದ,
ಸದ್ಯ ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821