News Karnataka Kannada
Monday, April 29 2024
ಬೆಂಗಳೂರು

ವೀಸಾಕ್ಕಾಗಿ ಚೆನ್ನೈಗೆ ಹೋಗುವ ಕಿರಿಕಿರಿಗೆ ಕೊನೆ: ಅಮೆರಿಕ ಅಧಿಕಾರಿಗಳು ಈ ಬಗ್ಗೆ ಹೇಳಿದ್ದೇನು

End to the hassle of going to Chennai for visa: Here's what US officials had to say
Photo Credit : News Kannada

ಬೆಂಗಳೂರು: ಅಮೆರಿಕಕ್ಕೆ ತೆರಳಲು ವೀಸಾ ಪಡೆಯಬೇಕಿದ್ದರೆ ಈಗ ಚೆನ್ನೈಯಲ್ಲಿರುವ ಅಮೆರಿಕ ಕಾನ್ಸುಲೇಟ್ ಅಥವಾ ರಾಯಭಾರ ಕಚೇರಿಗೆ ತೆರಳಿ ಸಂದರ್ಶನ ಹಾಗೂ ಇತರ ಪ್ರಕ್ರಿಯೆಗಳನ್ನು ಪೂರೈಸಬೇಕಾಗುತ್ತದೆ.

ಆದರೆ ಇನ್ನು ಮುಂದೆ ಅದರ ಅಗತ್ಯವಿಲ್ಲ. ಬೆಂಗಳೂರಿನಲ್ಲೇ ವೀಸಾ ಪಡೆಯುವ ಪ್ರಕ್ರಿಯೆಗಳನ್ನು ಪೂರೈಸಬಹುದು! ಹೌದು, ಬೆಂಗಳೂರು ಮತ್ತು ಅಹಮದಾಬಾದ್​​ನಲ್ಲಿ ಹೊಸದಾಗಿ ದೂತಾವಾಸ ಕಚೇರಿ ಆರಂಭಿಸುವುದಾಗಿ ಅಮೆರಿಕ ಘೋಷಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸದ ಸಂದರ್ಭದಲ್ಲೇ ಅಲ್ಲಿನ ಸರ್ಕಾರ ಈ ಘೋಷಣೆ ಮಾಡಿದೆ. ಇದರೊಂದಿಗೆ, ಕನ್ನಡಿಗರ ಬಹುದಿನಗಳ ಕನಸೊಂದು ನನಸಾಗುವ ಕಾಲ ಸನ್ನಿಹಿತವಾಗಿದೆ.

ಅಮೆರಿಕವು ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಎರಡು ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲಿದೆ. ಅದೇ ರೀತಿ ಭಾರತ ಸಿಯಾಟಲ್‌ನಲ್ಲಿ ಕಚೇರಿ ತೆರೆಯಲಿದ್ದು, ಜನರ ನಡುವಿನ ಬಾಂಧವ್ಯ ಹೆಚ್ಚಳಕ್ಕೆ ನೆರವಾಗಲಿದೆ ಎಂದು ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು