Bengaluru 26°C
Ad

ಎತ್ತಿನಹೊಳೆ ಯೋಜನೆ : ಶಿರಾ ತಾಲ್ಲೂಕಿಗೆ 0.514 ಟಿಎಂಸಿ ಕುಡಿಯುವ ನೀರು ಹಂಚಿಕೆ

ಎತ್ತಿನಹೊಳೆ ಯೋಜನೆಯಡಿ ಶಿರಾ ತಾಲ್ಲೂಕಿಗೆ ಕುಡಿಯುವ ನೀರಿಗಾಗಿ 0.514 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ನೀರನ್ನು ಶಿರಾ ತಾಲೂಕಿನ 200 ಕೆರೆಗಳಿಗೆ ತುಂಬಿಸುವ ಯೋಜನೆ ಕುರಿತು ಇಂದು ವಿಧಾನಸೌಧದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರ ಕಚೇರಿಯಲ್ಲಿ ಸಭೆ ನಡೆಯಿತು .

ಬೆಂಗಳೂರು: ಎತ್ತಿನಹೊಳೆ ಯೋಜನೆಯಡಿ ಶಿರಾ ತಾಲ್ಲೂಕಿಗೆ ಕುಡಿಯುವ ನೀರಿಗಾಗಿ 0.514 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ. ಈ ನೀರನ್ನು ಶಿರಾ ತಾಲೂಕಿನ 200 ಕೆರೆಗಳಿಗೆ ತುಂಬಿಸುವ ಯೋಜನೆ ಕುರಿತು ಇಂದು ವಿಧಾನಸೌಧದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರ ಕಚೇರಿಯಲ್ಲಿ ಸಭೆ ನಡೆಯಿತು .

ಜಲ ಸಂಪನ್ಮೂಲ ಇಲಾಖೆ, ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್ ರಾಜ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಟಿ.ಬಿ ಜಯಚಂದ್ರ ಅವರು ಹೇಮಾವತಿ ನದಿಯಿಂದ ಶಿರಾ ತಾಲೂಕಿಗೆ ಕುಡಿಯುವ ನೀರಿಗಾಗಿ ಯೋಜನೆಯನ್ನು ರೂಪಿಸಿದ್ದು ನೀರು ಸರಬರಾಜು ಆಗುತ್ತಿದೆ. ಹೀಗಾಗಿ ಎತ್ತಿನಹೊಳೆ ಯೋಜನೆಯಲ್ಲಿ ಶಿರಾ ತಾಲೂಕಿಗೆ ಹಂಚಿಕೆಯಾಗಿರುವ ನೀರನ್ನು ಕೆರೆಗಳಿಗೆ ತುಂಬಿಸಬೇಕು. ವಿಶ್ವಸಂಸ್ಥೆ ಮಾನದಂಡಗಳ ಪ್ರಕಾರ ಅಂತರ್ಜಲ ಅಭಿವೃದ್ಧಿ ಪಡಿಸಬೇಕು. ಈ ನಿಟ್ಟಿನಲ್ಲಿ ಶಿರಾ ತಾಲೂಕಿನ ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಲ್ಲಿ ನೀರು ತುಂಬಿಸಲು ವಿಸ್ತೃತ ಯೋಜನಾ ವರದಿಯನ್ನು ಸಿದ್ಧಪಡಿಸಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಸಮನ್ವಯ ಸಮಿತಿ ಸಭೆಯಲ್ಲಿ ಅನುಮತಿ ಪಡೆಯಬೇಕೆಂದು
ಟಿ.ಬಿ ಜಯಚಂದ್ರ ಅವರು ಸೂಚಿಸಿದರು. ಇದಕ್ಕೆ ಒಪ್ಪಿದ ಅಧಿಕಾರಿಗಳು ಮುಂದಿನ ಎತ್ತಿನಹೊಳೆ ಸಮನ್ವಯ ಸಮಿತಿ ಸಭೆಯಲ್ಲಿ ಅಗತ್ಯ ಮಾರ್ಪಾಡುಗಳನ್ನು ಮಾಡಿ ವಿಸ್ತೃತ ಯೋಜನಾ ವರದಿಯನ್ನು ಮಂಡಿಸಿ ಅನುಮತಿ ಪಡೆಯುವುದಾಗಿ ತಿಳಿಸಿದರು.

ಉಪಮುಖ್ಯಮಂತ್ರಿ
ಡಿ.ಕೆ ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರರಾಗದ ಕೆ .ಜೈಪ್ರಕಾಶ್ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ಮಂಡಳಿ ವ್ಯವಸ್ಥಾಪಕ ನಿರ್ದೇಶಕರಾದ ಸಣ್ಣ ಚಿತ್ತಯ್ಯ , ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿ ಯತೀಶ್ ಚಂದ್ರನ್ ಎತ್ತಿನಹೊಳೆ ಯೋಜನಾ ವಲಯದ ಮುಖ್ಯ ಇಂಜಿನಿಯರ್
ಎಂ ವರದಯ್ಯ,
ಗ್ರಾಮೀಣ ಕುಡಿಯುವ ನೀರು ಸರಬರಾಜು ಮುಖ್ಯ ಇಂಜಿನಿಯರ್ ಎಜಾಜ್ ಹಾಗೂಇಂಜಿನಿಯರ್ ಗಳಾದ ಆನಂದ್ ಕುಮಾರ್ ,
ಎಚ್.ಎಸ್ ನಾಗಭೂಷಣ್
ಟಿ.ಬಿ ಜಯಚಂದ್ರ ಅವರ ನೀರಾವರಿ ಸಲಹೆಗಾರರಾದ ಈಶ್ವರಯ್ಯ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇದೇ ವೇಳೆ ಶಿರಾ ವಿಧಾನಸಭಾ ಕ್ಷೇತ್ರದ ಎಲ್ಲಾ ಹಳ್ಳಿಗಳಿಗೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ಕುಡಿಯುವ ನೀರನ್ನು ಸಮರ್ಪಕ ವಾಗಿ ಒದಗಿಸಬೇಕು. ಯಾವ ಹಳ್ಳಿಗಳಿಗೆ ತೊಂದರೆಯಾಗುತ್ತಿದೆ ಎಂಬುದನ್ನು ಪರಿಶೀಲಿಸಿ ಸಮರ್ಪಕವಾಗಿ ಕುಡಿಯುವ ನೀರನ್ನು ಒದಗಿಸಬೇಕು ಯಾವುದೇ ದೂರುಗಳು ಬರದಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಇದೇ ವೇಳೆ ಜಯಚಂದ್ರ ಅವರು ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಅಧಿಕಾರಿಗಳಿಗೆ ತಿಳಿಸಿದರು.

Ad
Ad
Nk Channel Final 21 09 2023
Ad