Ad

ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ ಮಾಡುವಂತಿಲ್ಲ : ಸಿ.ಎಂ ಎಚ್ಚರಿಕೆ

ಇನ್ನು ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ ಮಾಡುವಂತಿಲ್ಲ ಎಂದು ಸಿ.ಎಂ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮಾರಟ ಮಾಡಿದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಬೆಂಗಳೂರು : ಇನ್ನು ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ ಮಾಡುವಂತಿಲ್ಲ ಎಂದು ಸಿ.ಎಂ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮಾರಟ ಮಾಡಿದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಎಚ್ಚರಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

Ad
300x250 2

ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾದ ವರದಿಗಳನ್ನು ಆಧರಿಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಬಸ್‌ ನಿಲ್ದಾಣಗಳ ಸ್ಟಾಲ್‌ಗಳಲ್ಲಿ ಮಾರಾಟವಾಗುವ ಆಹಾರ ಪದಾರ್ಥಗಳ ಬಗ್ಗೆ ಹಲವು ಬಳಕೆದಾರರು ಸಾಮಾಜಿಕ ಜಾಲತಾಣಗಳಲ್ಲಿ ದೂರು ತೋಡಿಕೊಂಡಿದ್ದರು. ಲಘು ಪಾನೀಯಗಳು, ತೆರೆದಿಟ್ಟ ಆಹಾರ ಪದಾರ್ಥಗಳ ಸ್ವಚ್ಛತೆ, ನೈರ್ಮಲ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

 

Ad
Ad
Nk Channel Final 21 09 2023
Ad