ಬೆಂಗಳೂರು : ಸ್ವಲ್ಪ ದಿನದ ಮಟ್ಟಿಗೆ ನಿಂತಿದ್ದ ಬಾಂಬ್ ಬೆದರಿಕೆ ಸರಣಿ ಇದೀಗ ಮತ್ತೆ ಸದ್ದು ಮಾಡಿದೆ. ಬೆಂಗಳೂರಿನ ಜೆ.ಪಿ.ನಗರದ 4ನೇ ಹಂತದಲ್ಲಿರುವ ಬ್ರಾಡ್ ಕಾಂ’ ಕಂಪನಿಗೆ ಬೆಳಗ್ಗೆ 11:50ರ ಸುಮಾರಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬೆದರಿಕೆ ಮೇಲ್ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ಸರ್ಕಾರಿ ಅಧಿಕಾರಿಗಳಿಗೆ ಸಿಬ್ಬಂದಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿ, ಬಾಂಬ್ ಸ್ಕ್ವಾಡ್ ಕರೆಯಿಸಿ ಪರಿಶೀಲನೆ ನಡೆಸಿದ್ದರು
Ad