News Karnataka Kannada
Tuesday, April 30 2024
ಬೆಂಗಳೂರು

ನಕಲಿ ಉದ್ಯೋಗ ದಂಧೆ: ದೇಶದ ಹಲವೆಡೆ ಸಿಬಿಐ ದಾಳಿ, ಮೂವರ ಬಂಧನ

Fake job racket: CBI conducts raids in various parts of the country, arrests three
Photo Credit : News Kannada

ಬೆಂಗಳೂರು: ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಇಂದು(ನ.10) ದಾಳಿ ನಡೆಸಿರುವ ಸಿಬಿಐ (CBI) ಅಧಿಕಾರಿಗಳು ಅಂತಾರಾಜ್ಯ ನಕಲಿ ಉದ್ಯೋಗ ದಂಧೆಯನ್ನು ಬಯಲಿಗೆಳೆದಿದ್ದು, ಮೂವರನ್ನು ಬಂಧಿಸಿದ್ದಾರೆ.

ಸರಕಾರಿ ನೌಕರಿ ಕೊಡಿಸುವುದಾಗಿ ಕಳೆದ ಎರಡು ವರ್ಷಗಳಿಂದ ಆಕಾಂಕ್ಷಿಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿದ್ದ ಆರೋಪದಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಹಾರದ ಪಾಟ್ನಾ, ಕರ್ನಾಟಕದ ಮಂಗಳೂರು, ಬೆಂಗಳೂರು ಮತ್ತು ಜಾರ್ಖಂಡ್​​ನ ಧನ್‌ಬಾದ್‌ನ ಒಂಬತ್ತು ಸ್ಥಳಗಳಲ್ಲಿ ಶೋಧ ಕಾರ್ಯ ನಡೆದಿದೆ ಎಂದು ಅವರು ಹೇಳಿದ್ದಾರೆ.

ಎರಡು ವರ್ಷಗಳಿಂದ ಆರೋಪಿಗಳು ಕೃತ್ಯ ಎಸಗುತ್ತಿದ್ದು, ಸರ್ಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿ ಆಕಾಂಕ್ಷಿಗಳಿಂದ ಕೋಟ್ಯಂತರ ರೂಪಾಯಿ ವಸೂಲಿ ಮಾಡಿರುವುದು ಶೋಧದ ವೇಳೆ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳಿಗೆ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಹತಾಶ ಉದ್ಯೋಗಾಕಾಂಕ್ಷಿಗಳನ್ನು ಸಂಪರ್ಕಿಸುವುದು ಈ ಆರೋಪಿಗಳ ತಂತ್ರವಾಗಿದೆ. ನಂತರ ಅವರನ್ನು ವಂಚಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು