ಬೆಂಗಳೂರು: ಹೈದರಾಬಾದ್ನಲ್ಲಿ ಸರ್ಕಾರಿ ಸ್ವಾಮ್ಯದ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆಯಾಗಿದ್ದು, 2 ಕೋಟಿ ರೂ. ಮೌಲ್ಯದ ಸಾಮಾಗ್ರಿ ವಶಕ್ಕೆ ಪಡೆಯಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತರನ್ನು ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂದು ಗುರುತಿಸಲಾಗಿದೆ.
ನಕಲಿ ಉತ್ಪನ್ನ, ಪ್ಯಾಕಿಂಗ್ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಸೇರಿದಂತೆ ಸಾಮಾಗ್ರಿಗಳು ಪತ್ತೆಯಾಗಿವೆ.
ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಸಚಿವ ಎಂಬಿ. ಪಾಟೀಲ್ಗೆ ಅನಾಮಧೇಯ ಕರೆ ಬಂದಿತ್ತು, ಆ ಮೂಲಕ ಕಾರ್ಖಾನೆ ಎಂಡಿ ಡಾ. ಪ್ರಶಾಂತ್ಗೆ ನಿಗಾ ವಹಿಸಲು ಸೂಚಿಸಿದ್ದರು.
ಸ್ವತಃ 1 ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ ಮೂಲ ಪತ್ತೆಗೆ ಕೆಎಸ್ಡಿಎಲ್ ಸಿಬ್ಬಂದಿ ಮುಂದಾಗಿದ್ದರು.ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಪತ್ತೆ ಹಚ್ಚಿದ್ದಾರೆ.