ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ವಿರುದ್ಧ ಎಫ್‌ಐಆರ್

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ ಹುಟ್ಟಿಹಾಕಲು ಯತ್ನ ಮಾಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮತ್ತು ಆರ್.‌ಕನ್ನಡ ಸಂಪಾದಕ ನಿರಂಜನ್ ಅವರ ವಿರುದ್ಧ ಎಸ್. ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕೆಪಿಸಿಸಿಯ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿ ರವೀಂದ್ರ ಎಂ ಡಿ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಾರ್ಚ್ 27ರಂದು ಸಂಜೆ ಸಂಜೆ 7:15 ಗಂಟೆಗೆ ಆರ್ ಕನ್ನಡ ಸುದ್ದಿ ವಾಹಿನಿಯಲ್ಲಿ ಎಂಜಿ ರಸ್ತೆಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಚರಿಸುವಾಗ ವಾಹನಗಳ ಸಂಚಾರ ತಡೆದು ಆ್ಯಂಬುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ಮಾಡಿದ ವಿಡಿಯೋ ತುಣುಕನ್ನು ಪ್ರಸಾರ ಮಾಡಲಾಗಿದೆ.

ಆದರೆ ನಿಜವಾಗಿ ಸಿಎಂ ಸಿದ್ಧರಾಮಯ್ಯ ಅವರು ಈ ಸಂದರ್ಭದಲ್ಲಿ ಮೈಸೂರಿನಲ್ಲಿದ್ದು, ಬೆಂಗಳೂರಿನ ಕಡೆಗೆ ಪ್ರಯಾಣ ಮಾಡಿಲ್ಲ. ಈ ವಿಡಿಯೋವನ್ನು ಪರಿಶೀಲನೆ ನಡೆಸದೆ ಚುನಾವಣೆಯ ಸಂದರ್ಭದಲ್ಲಿ ಸಾರ್ವಜನಿಕರನ್ನು ಪ್ರಚೋದಿಸುವ ನಿಟ್ಟಿನಲ್ಲಿಯೇ ತಪ್ಪು ಮಾಹಿತಿ ಪ್ರಸಾರ ಮಾಡಲಾಗಿದೆ ಎಂದು ದೂರು ನೀಡಿದೆ.

ಈ ದೂರಿನ ಆಧಾರದಲ್ಲಿ ತಪ್ಪು ಮಾಹಿತಿ ಪ್ರಸಾರ ಮಾಡಿರುವ ಆರ್ ಕನ್ನಡ (ರಿಪಬ್ಲಿಕ್) ವಾಹಿನಿಯ ಮಾಲೀಕ ಅರ್ನಬ್ ಗೋ ಸ್ವಾಮಿ ಮತ್ತು ಸಂಪಾದಕ ನಿರಂಜನ್ ವಿರುದ್ಧ ಎಸ್. ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

 

Ashitha S

Recent Posts

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

4 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

32 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

37 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

50 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

56 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

59 mins ago