ಬೆಂಗಳೂರು: ಈ ಬಾರಿಯ ಲೋಕಸಭ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಫಕೀರ ದಿಂಗಾಲೇಶ್ವರ ಮಹಾಸ್ವಾಮಿ ಘೋಷಿಸಿದ್ದಾರೆ. ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಈ ಹಿಂದೆ ಭಕ್ತರಿಂದ ಅಭಿಪ್ರಾಯ ಪೆಡದಿದ್ದರು. ಇದೀಗ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಖಚಿತ ಮಾಹಿತಿ ನೀಡಿದ್ದಾರೆ.
ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನಮ್ಮ ಸಮುದಾಯವನ್ನು ತುಳಿಯುತ್ತಿದ್ದಾರೆ, ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಅವರ ಕೊಡುಗೆ ಇಂದಿಗೂ ಪ್ರಶ್ನಾರ್ಹವಾಗಿದೆ ಎಂದು ಫಕ್ಕೀರೇಶ್ವರ ಮಠದ ಪೀಠಾಧಿಪತಿ, ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿ ಹೇಳಿದರು.