News Karnataka Kannada
Friday, May 03 2024
ಬೆಂಗಳೂರು

ತಂದೆ ದೇಶಕ್ಕಾಗಿ ಹೋರಾಡಿದ ಯೋಧ, ಮಗ ರಾಮೇಶ್ವರಂ ಕೆಫೆ ಸ್ಫೋಟದ ಮಾಸ್ಟರ್ ಮೈಂಡ್

ರಾಮೇಶ್ವರಂ ಕೆಫೆ ಬ್ಲಾಸ್ಟ್ ನ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹನನ್ನು ಎನ್ಐಎ ಅರೆಸ್ಟ್​​ ಮಾಡಿ ಪಶ್ಚಿಮ ಬಂಗಾಳದಿಂದ ವಿಚಾರಣೆಗಾಗಿ ಬೆಂಗಳೂರಿಗೆ  ಕರೆತಂದು ಆತನ ವಿಚಾರಣೆ ನಡೆಸುತ್ತಿದ್ದಾರೆ.
Photo Credit : NewsKarnataka

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್ ನ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹನನ್ನು ಎನ್ಐಎ ಅರೆಸ್ಟ್​​ ಮಾಡಿ ಪಶ್ಚಿಮ ಬಂಗಾಳದಿಂದ ವಿಚಾರಣೆಗಾಗಿ ಬೆಂಗಳೂರಿಗೆ  ಕರೆತಂದು ಆತನ ವಿಚಾರಣೆ ನಡೆಸುತ್ತಿದ್ದಾರೆ.

ಕೆಫೆ ಬ್ಲಾಸ್ಟ್ ನ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಎಂಜಿನಿಯರಿಂಗ್ ಪದವೀಧರ. ಆತನ ತಂದೆ ದೇಶಕ್ಕಾಗಿ ಹೋರಾಡಿದ ನಿವೃತ್ತ ಯೋಧ. ವರ್ಷದ ಹಿಂದೆ ಅವರು ಮೃತಪಟ್ಟಿದ್ದರು.

ಈತ ಪೋಷಕರಿಗೆ ಒಬ್ಬನೇ ಮಗನಾಗಿದ್ದನು. ತೀರ್ಥಹಳ್ಳಿಯಲ್ಲಿ ಪ್ರೌಢಶಾಲೆ ಮುಗಿಸಿ ಬೆಂಗಳೂರಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದನು. ಬೆಂಗಳೂರಿಗೆ ಬಂದ ವೇಳೆ ಉಗ್ರರ ಸಂಪರ್ಕಕ್ಕೆ ಬಂದಿದ್ದನು.

ಮತೀನ್​ ತಾಹ  ಐಇಡಿ ಬಾಂಬ್ ತಯಾರಿಕೆಯ ಎಕ್ಸ್’ಪರ್ಟ್ ಆಗಿದ್ದನು. ಕಳೆದ ನಾಲ್ಕು ವರ್ಷಗಳಿಂದ ನಾಪತ್ತೆಯಾಗಿದ್ದ ಈತ ವಿವಿಧ ರಾಜ್ಯಗಳಲ್ಲಿ ನಾನಾ ಹೆಸರುಗಳಿಂದ ತಲೆಮರೆಸಿಕೊಂಡಿದ್ದನು.

ಅಬ್ದುಲ್ ಮತೀನ್ ತಾಹ ಮಂಗಳೂರು ಕುಕ್ಕರ್ ಬ್ಲಾಸ್ಟ್, ರಾಮೇಶ್ವರಂ ಕೆಫೆ ಬ್ಲಾಸ್ಟ್, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್, ಮಾಸ್ಟರ್ ಮೈಂಡ್ ಆಗಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು