News Karnataka Kannada
Friday, May 10 2024
ಬೆಂಗಳೂರು

ಕ್ಷುಲ್ಲಕ ಕಾರಣಕ್ಕೆ ಜಗಳ: ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.
Photo Credit : NewsKarnataka

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಟೀ ಶಾಪ್ ಯುವಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ನಗರದ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ.

ಟೀ‌, ಸಿಗರೇಟ್‌ಗೆ ಕೊಟ್ಟ ದುಡ್ಡು ಕಮ್ಮಿ ಇದೆ ಅಂದಿದ್ದಕ್ಕೆ ಅನ್ಯ ಧರ್ಮೀಯ ಯುವಕರು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದರಿಂದ ಟೀ ಶಾಪ್ ಯುವಕನ ತಲೆಗೆ ಗಂಭೀರ ಗಾಯಗೊಳಿಸಿದ್ದಾರೆ.

ಟೀ ಶಾಪ್‌ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕೆಟ್ಟ ಪದ ಬಳಸಿದಕ್ಕೆ ಟೀ ಶಾಪ್ ಯುವಕ ಪ್ರಶ್ನಿಸಿದ್ದಾನೆ. ಈ ವೇಳೆ ಇಬ್ಬರು ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ನಂತರ ಬಿಯರ್ ಬಾಟಲಿನಿಂದ ಟೀ ಶಾಪ್ ಯುವಕನ ಮೇಲೆ ಅನ್ಯಧರ್ಮೀಯ ಯುವಕರು ಹಲ್ಲೆ ನಡೆಸಿದ್ದಾರೆ.

ಗಲಾಟೆಯಲ್ಲಿ ಟೀ ಶಾಪ್‌ ಯುವಕನ ತಲೆಗೆ ಗಂಭೀರ ಗಾಯಗಳಾಗಿದ್ದು, ಅನ್ಯಧರ್ಮಿಯ ಯುವಕರಿಗೂ ಗಾಯಗಳಾಗಿವೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಟನ್ ಪೇಟೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ. ಪೊಲೀಸರು  ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು