ಬೆಂಗಳೂರು: ಆಕ್ಷೇಪಾರ್ಹ ಪದ ಬಳಕೆ ಆರೋಪದಲ್ಲಿ ಬರಹಗಾರ, ನಟ ಕಿಚ್ಚ ಸುದೀಪ್ ಮ್ಯಾನೇಜರ್ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನಿರ್ಮಾಪಕ ಕೆ.ಮಂಜು ನೀಡಿರುವ ದೂರಿನ ಹಿನ್ನೆಲೆಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಿಎನ್ ಎಸ್ ಸೆಕ್ಷನ್ 351, 352 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಾನಹಾನಿ, ಬೆದರಿಕೆ, ಶಾಂತಿಭಂಗ ಉಂಟುಮಾಡುವ ಆರೋಪದಡಿ ಪ್ರಕರಣ ದಾಖಲಾಗಿದೆ.
ಚಕ್ರವರ್ತಿ ಚಂದ್ರಚೂಡ್ ನಿರ್ಮಾಪಕರ ಬಗ್ಗೆ ಅಸಂವಿಧಾನಿಕ ಪದ ಬಳಕೆ ಮಾಡಿ ಮಾತನಾಡಿದ್ದರು. ಕನ್ನಡ ಚಿತ್ರ ನಿರ್ಮಾಪಕರ ಪರವಗಿ ನಿರ್ಮಾಪಕ ಕೆ.ಮಂಜು ಉಪ್ಪಾರಪೇಟೆ ಠಾಣೆಯಲ್ಲಿ ದೂರು ನೀಡಿದ್ದರು. ಆರಂಬದಲ್ಲಿ ಪೊಲೀಸರು ಎನ್ ಸಿ ಆರ್ ದಾಖಲಿಸಿದ್ದರು. ಇದೀಗ ಕೋರ್ಟ್ ಅನುಮತಿ ಪಡೆದು ಚಂದ್ರಚೂಡ್ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.

