News Karnataka Kannada
Thursday, May 02 2024
ಬೆಂಗಳೂರು

ಯತ್ನಾಳ್ ವಿರುದ್ಧ ದಿನೇಶ್ ಪತ್ನಿ ಟಬು ರಾವ್ ದೂರು : ಕಾರಣ ಇಲ್ಲಿದೆ

ನೆನ್ನಯಷ್ಟೆ ಶಾಸಕ ಯತ್ನಾಳ್‌ ವಿರುದ್ಧ ದೂರು ದಾಖಲಾಗಿದ್ದು ಇದೀಗ ಅವರ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ದೂರು ಅವರು ಯತ್ನಾಳ್‌ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದಾರೆ.
Photo Credit : NewsKarnataka

ಬೆಂಗಳೂರು: ನೆನ್ನಯಷ್ಟೆ ಶಾಸಕ ಯತ್ನಾಳ್‌ ವಿರುದ್ಧ ದೂರು ದಾಖಲಾಗಿದ್ದು ಇದೀಗ ಅವರ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ದೂರು ಅವರು ಯತ್ನಾಳ್‌ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದಾರೆ.

ಇದಕ್ಕೂ ಮುಂಚೆ ಟಬು ರಾವ್ ಅವರು ಶಾಸಕ ಯತ್ನಾಳ್​ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಬಿಜೆಪಿ ನಾಯಕರಿಗೆ ತಮ್ಮ ಟ್ವಿಟರ್​ ಖಾತೆಯಲ್ಲಿ ಮನವಿ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ದೂರು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಟಬು ರಾವ್, ಬಸನಗೌಡ ಪಾಟೀಲ್ ಯತ್ನಾಳ್ ಯಾರು ನನಗೆ ಗೊತ್ತಿಲ್ಲ. ನಾನು ರಾಜಕೀಯದಲ್ಲಿಲ್ಲ, ನನಗೇಕೆ ಹೀಗೆ ಹೇಳಿದ್ದಾರೆ ಗೊತ್ತಿಲ್ಲ. ಈ ರೀತಿ ಮಾತನಾಡೋದೆ ರಾಜಕೀಯನಾ ಎಂದು ಪ್ರಶ್ನೆ ಮಾಡಿದ್ದಾರೆ.

ಕಾರಣ ಏನು?
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ‘ರಾಮೇಶ್ವರ ಕೆಫೆ ಬಾಂಬ್ ಬ್ಲಾಸ್ಟ್ ಕೇಸ್​ನಲ್ಲಿ ಬಿಜೆಪಿ ಕಾರ್ಯಕರ್ತ ವಿಚಾರಣೆ ನಡೆಸಿದ್ದ ಎನ್​ಐಎ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾನಾಡುವಾಗ ದಿನೇಶ್ ಗುಂಡೂರಾವ್ ಕುಟುಂಬದ ಬಗ್ಗೆ ಮಾತಾಡಿದ್ದಾರೆ. ಈ ವೇಳೆ ಸಚಿವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿದ್ದಾರೆ. ಈ ಕುರಿತು ದೂರು ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು