ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇತ್ತೀಚೆಗೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವಾಗ ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹಾಗೂ ವೈಯಕ್ತಿಕವಾಗಿ ನಿಂದಿಸಿದ್ದಾರೆ.
ಅಲ್ಲದೇ ಧರ್ಮಗಳ ನಡುವೆ ಕೋಮುಸೌಹಾರ್ಧತೆ ಉಂಟು ಮಾಡುವುದಲ್ಲದೇ ರಾಹುಲ್ ಗಾಂಧಿ ಕುಟುಂಬದ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ವಿಡಿಯೊ ಕ್ಲೀಪಿಂಗ್ ಸಮೇತ ದೂರು ನೀಡಿದ ಪ್ರಕರಣ ದಾಖಲಾಗಿದೆ.
Ad