News Karnataka Kannada
Saturday, May 04 2024
ಬೆಂಗಳೂರು

ಮತದಾರರನ್ನು ಬೆದರಿಸಿದ ಆರೋಪ; ಡಿಕೆಶಿ ವಿರುದ್ಧ ಎಫ್​ಐಆರ್ ದಾಖಲು

ಸಹೋದರನ ಪರವಾಗಿ ಮತಯಾಚನೆ ಮಾಡುವ ವೇಳೆಯಲ್ಲಿ ಅಪಾರ್ಟ್ಮೆಂಟ್‌ ಒಂದರಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.
Photo Credit : NewsKarnataka

ಬೆಂಗಳೂರು: ಸಹೋದರನ ಪರವಾಗಿ ಮತಯಾಚನೆ ಮಾಡುವ ವೇಳೆಯಲ್ಲಿ ಅಪಾರ್ಟ್ಮೆಂಟ್‌ ಒಂದರಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಆರ್​ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್​ ಅಭ್ಯರ್ಥಿ ಡಿಕೆ ಸುರೇಶ್ ಪರ ಮತಯಾಚನೆ ಮಾಡುವ ಸಂದರ್ಭದಲ್ಲಿ ಆರ್​ಆರ್​ ನಗರ ಅಪಾರ್ಟ್ಮೆಂಟ್ ಘಟನೆ ನಡೆದಿದೆ ಎನ್ನಲಾಗಿದ್ದು, ಬಿಜೆಪಿ ನೀಡಿದ ಮಾಹಿತಿಯ ಆಧಾರದಲ್ಲಿ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.

ಈ ಮೊದಲು ಕೂಡ ಡಿಕೆಶಿ ಮತದಾರರಿಗೆ ಬ್ಲ್ಯಾಕ್​ಮೇಲ್ ಮಾಡಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿತ್ತು. ‘ನಾನು ಇಲ್ಲಿಗೆ ವ್ಯವಹಾರಕ್ಕಾಗಿ ಬಂದಿದ್ದೇನೆ. ಈ ಅಪಾರ್ಟ್ಮೆಂಟ್​​ನಲ್ಲಿ 2510 ಮನೆಗಳಿವೆ. 6424 ಮತಗಳಿವೆ. ನಿಮ್ಮ ಎರಡು ಸಮಸ್ಯೆಗಳೆಂದರೆ ಹಕ್ಕುಪತ್ರ ನಿಮಗೆ ಹಸ್ತಾಂತರವಾಗದಿರುವುದು. ಎರಡನೇಯದ್ದು ಕಾವೇರಿ ನೀರು ಸಂಪರ್ಕ ದೊರೆಯದೇ ಇರುವುದು. ಒಂದು ವೇಳೆ ಈ ಎರಡನ್ನೂ ನಾನು ನಿಮಗೆ ನೀಡಿದರೆ ನೀವು ನನಗೆ ಏನು ಕೊಡುತ್ತೀರಿ?, ನಿಮ್ಮ ಬೂತ್​ ಆರ್​ಆರ್​ ನಗರದಲ್ಲಿದೆ. 2 ರಿಂದ 3 ಬೂತ್​ನಲ್ಲಿ ನಮ್ಮ ಪರವಾದ ಮತಗಳಿವೆ. ಪ್ರಶ್ನಾರ್ಥಕವಾಗಿ ಉಳಿದಿರುವುದು ನಿಮ್ಮ ಬೂತ್​ ಮಾತ್ರ. ಈಗ ಹೇಳಿ ಏನು ಮಾಡುತ್ತೀರಿ’ ಎಂದು ಡಿಕೆಶಿ ಕೇಳುತ್ತಿರುವುದು ಬಿಜೆಪಿ ಟ್ವೀಟ್ ಮಾಡಿದ ವಿಡಿಯೋದಲ್ಲಿದ್ದು, ದೂರು ನೀಡಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು